ರಾಜ್ಯದಲ್ಲಿ ಕೋವೊಡ್ , ಓಮಿಕ್ರಾನ್ ಕುರಿತು ತಜ್ಙರು ಬಿಚ್ಚಿಟ್ಟ ಸತ್ಯವೇನು.

 

 

 

 

ಬೆಂಗಳೂರು,ಜ.೨- ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ರೂಪಾಂತರಿ ತಳಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಹೀಗೇ ಮುಂದುವರೆದರೆ ಸೋಂಕು ತಡೆಗೆ ರಾಜ್ಯಾದ್ಯಂತ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಲಿದೆ ಎಂದು ಸರ್ಕಾರಕ್ಕೆ ಮನದಟ್ಟು ಮಾಡಿಕೊಟ್ಟಿದೆ.
ರಾಜ್ಯದಲ್ಲಿ ನಿನ್ನೆಯವರೆಗೂ ಕೊರೊನಾ ಪಾಸಿಟಿವಿಟಿ ಪ್ರಮಾಣ ೦.೮೬ ರಷ್ಟಿದೆ. ಈಗ ೩ನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆಯ ಸಂದೇಶ ರವಾನಿಸಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಪಾಸಿಟಿವಿಟಿ ದರ ಶೇ. ೫ಕ್ಕೆ ಏರಿಕೆಯಾದರೆ, ಲಾಕ್‌ಡೌನ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.
ಸೋಂಕಿನ ತೀವ್ರತೆಗೆ ಆಸ್ಪತ್ರೆಗಳಲ್ಲಿ ದಾಖಲಾಗಿ ಶೇ. ೪೦ ರಷ್ಟು ಹಾಸಿಗೆಗಳು ಭರ್ತಿಯಾದರೆ ಲಾಕ್‌ಡೌನ್ ಮಾಡಬೇಕಾಗುತ್ತದೆ ಎಂದು ತಾಂತ್ರಿಕಾ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ರಾಜ್ಯದಲ್ಲಿ ಸೋಂಕು ತಡೆಯಲು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಬೇಕು, ಮಾಸ್ಕ್, ಸಾಮಾಜಿಕ ಅಂತರ, ಜನದಟ್ಟಣೆ ಪ್ರದೇಶಗಳಲ್ಲಿ ಪರೀಕ್ಷೆ ಚುರುಕುಗೊಳಿಸುವಂತೆಯೂ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.
ಮತ್ತೊಂದೆಡೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಲ್ಲಿ ಈ ತಿಂಗಳ ಏಳರವರೆಗೆ ರಾತ್ರಿ ಕರ್ಫ್ಯೂಜಾರಿಯಲ್ಲಿದೆ.
ನಿನ್ನೆ ರಾಜ್ಯದಲ್ಲಿ ೬ ತಿಂಗಳ ಬಳಿಕ ೧೦೩೩ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಒಟ್ಟು ೭೮೭೬ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ ಬೆಂಗಳೂರಿನಲ್ಲಿ ೪೬ ಮಂದಿಗೆ ಒಮಿಕ್ರಾನ್ ಸೋಂಕು ತಗುಲಿದೆ. ಈ ಮೂಲಕ ಒಮಿಕ್ರಾನ್ ಸೋಂಕಿತರ ಸಂಖ್ಯೆ ೬೬ಕ್ಕೇರಿದೆ.
ವಿದೇಶಿ ಪ್ರಯಾಣಿಕರಿಗೆ ಸೋಂಕು ತಗುಲುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಯನ್ನು ಚುರುಕುಗೊಳಿಸಲಾಗಿದೆ. ಇದುವರೆಗೆ ವಿದೇಶದಿಂದ ಬಂದವರಲ್ಲಿ ೧೦೬ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇಂಗ್ಲೆಂಡ್ ಮತ್ತು ಫ್ರಾನ್ಸ್‌ನಿಂದ ಬಂದ ಪ್ರಯಾಣಿಕರಿಗೆ ಸೋಂಕು ತಗುಲಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
೩ನೇ ಅಲೆ ಭೀತಿ
ರಾಜ್ಯದಲ್ಲೂ ೩ನೇ ಅಲೆ ಭೀತಿ ಎದುರಾಗಿದ್ದು, ಫೆಬ್ರವರಿ ತಿಂಗಳಿನಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಲಿದೆ ಎಂದು ತಜ್ಞರು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ ೩ನೇ ಅಲೆಯ ಸುಳಿವು ನೀಡಿದ್ದು, ದೆಹಲಿ ಮಾದರಿಂiiಲ್ಲಿ ಕ್ರಮಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದಾರೆ.
ಡೆಲ್ಟಾ ರೂಪಾಂತರಿ ಮೂಲಕ ೨ನೇ ಅಲೆ ಕಾಣಿಸಿಕೊಂಡ ವೇಳೆ ದೇಶಾದ್ಯಂತ ಅಪಾರ ಸಾವು-ನೋವು ಸಂಭವಿಸಿತ್ತು. ಇದು ಮರುಕಳಿಸದಂತೆ ಕ್ರಮಕೈಗೊಳ್ಳಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿರುವ ವಸತಿ ಶಾಲೆ, ಹಾಸ್ಟೆಲ್, ಅಪಾರ್ಟ್‌ಮೆಂಟ್, ಮಾಲ್ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸಬೇಕು. ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು, ಕ್ಲಸ್ಟರ್‌ಗಳಿಂದ ಶೇ. ೩೦ ರಷ್ಟು ಎಲ್ಲ ಮಾದರಿಗಳನ್ನು ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕೆಂದು ತಜ್ಞರು ಶಿಫಾರಸ್ಸು ಮಾಡಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours