ಮಂಗಳೂರು, ಅ.29: ಸೌಜನ್ಯ ಪ್ರಕರಣ ಮರು ತನಿಖೆಗೆ ಸಂಬಂಧಿಸಿ ಎಸ್ಐಟಿಯ ಮುಖ್ಯಸ್ಥರಾಗಿ ನಿಯೋಜನೆಗೊಂಡು ತನಿಖೆ ಆರಂಭಿಸಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳ ಮೇರೆಗೆ ಎಸ್ಐಟಿಯಿಂದ ಬಿಡುಗಡೆಗೊಳ್ಳಲಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಅಧಿಕೃತ ಆದೇಶ ಇನ್ನಷ್ಟೇ ಆಗಬೇಕಾಗಿದೆ.
ಎಸ್ಐಟಿಯಿಂದ ತನ್ನನ್ನು ಹೊರಗಿಡುವಂತೆ ಒತ್ತಾಯಿಸಿ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು ಎನ್ನಲಾಗಿದೆ. ಎಸ್ಐಟಿಗೆ ನೂತನ ಮುಖ್ಯಸ್ಥರಾಗಿ ಲಾಬುರಾಮ್ ಅಥವಾ ಚೇತನ್ ಸಿಂಗ್ ರಾಥೋಡ್ ನೇಮಕವಾಗುವ ಸಾಧ್ಯತೆ ಇದೆ.
ಈಗಾಗಲೇ ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರ ಬದಲಾವಣೆಯ ಬಗ್ಗೆಯೂ ಆದೇಶವಾಗುವ ಸಾಧ್ಯತೆ ಇದೆ. ಅವರ ಸ್ಥಾನಕ್ಕೆ ಎಸಿಪಿ ಶ್ರೀನಿಧಿ ನೇಮಕವಾಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.


