ಬೆಂಗಳೂರು ಅ. 29: ಕೊನೆಗೂ ನಂದಿನಿ ಹಾಲಿಗೆ ದರವನ್ನು 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು (ಅಕ್ಟೋಬರ 29) ನಡೆದ ಸಚಿವ ಸಂಪುಟದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ ಬರೋಬ್ಬರಿ ಎಂಟು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಈ 8 ರೂಪಾಯಿ ಪೈಕಿ ರೈತರಿಗೆ 7 ರೂಪಾಯಿ ಮತ್ತು ಉಳಿದ 1 ರೂಪಾಯಿ ಒಕ್ಕೂಟಗಳಿಗೆ ಸಿಗಲಿದ್ದು, ನವೆಂಬರ್ 1 ರಿಂದ ಪರಿಸ್ಕೃತ ದರ ಜಾರಿಗೆ ಬರಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದ್ರೆ, ಅಂತಿಮವಾಗಿ 90:10ರಂತೆ ದರ ಏರಿಸಲಾಗಿದೆ.

ದರ ಏರಿಕೆಯ 8 ರೂಪಾಯಿಯಲ್ಲಿ 7 ರೂಪಾಯಿಯನ್ನು ರೈತರಿಗೆ ಸಹಾಯಧನವಾಗಿ ನೀಡಲು ನಿರ್ಧರಿಸಲಾಗಿದೆ. ರೈತರಿಗೆ ಬಮುಲ್ ವ್ಯಾಪ್ತಿಯಲ್ಲಿ ಸದ್ಯ ಪ್ರತಿ ಲೀಟರ್ಗೆ 33 ರೂ. ದಿಂದ 35 ರೂ. ನೀಡಲಾಗುತ್ತಿದ್ದು, ಆ ಮೊತ್ತ 40 ರಿಂದ 42 ರೂಪಾಯಿಗೆ ಹೆಚ್ಚಳವಾಗಲಿದೆ. ಹೆಚ್ಚುವರಿ 1 ರೂಪಾಯಿಯನ್ನು ಹಾಲು ಮಂಡಳಿಗಳ ಪಾಲಾಗಿದೆ.

