2026-27ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ ಪ್ರಕಟಿಸಿದೆ. ಕರ್ನಾಟಕದಲ್ಲಿ ಫೆಬ್ರವರಿ 27ರಿಂದ ಮಾರ್ಚ್ 18ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ಜರುಗಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆ 1ರ ವೇಳಾಪಟ್ಟಿ ಹೀಗಿದೆ
- ಫೆ.27ರಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯೊಂದಿಗೆ ಆರಂಭ
- ಮಾ.1ರಂದು ಇಂಗ್ಲಿಷ್
- ಮಾ.2ರಂದು ಪ್ರಾದೇಶಿಕ ಭಾಷೆಗಳ ಪರೀಕ್ಷೆ- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್
- ಮಾ.3ರಂದು ಭೂಗೋಳ ಶಾಸ್ತ್ರ ಮತ್ತು ಮನಃಶಾಸ್ತ್ರ
- ಮಾ.4ರಂದು ಸಮಾಜಶಾಸ್ತ್ರ ಮತ್ತು ಭೌತಶಾಸ್ತ್ರ
- ಮಾ.5ರಂದು ಲೆಕ್ಕಶಾಸ್ತ್ರ
- ಮಾ.6ರಂದು ಮಹಾಶಿವರಾತ್ರಿ ಹಿನ್ನೆಲೆ ರಜೆ (ಪರೀಕ್ಷೆ ಇಲ್ಲ)
- ಮಾ.8ರಂದು ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ ಮತ್ತು ಮೂಲ ಗಣಿತ
- ಮಾ.9ರಂದು ಅರ್ಥಶಾಸ್ತ್ರ ಮತ್ತು ಭೂಗರ್ಭ ಶಾಸ್ತ್ರ
- ಮಾ.10ರಂದು ರಂಜಾನ್ ಹಿನ್ನೆಲೆ ರಜೆ (ಪರೀಕ್ಷೆ ಇಲ್ಲ)
- ಮಾ.11ರಂದು ಹಿಂದೂಸ್ತಾನಿ ಸಂಗೀತ ಹಾಗೂ ವೃತ್ತಿಪರ ವಿಷಯಗಳ ಪರೀಕ್ಷೆ
- ಮಾ.12ರಂದು ವ್ಯವಹಾರ ಅಧ್ಯಯನ ಮತ್ತು ಗಣಿತ
- ಮಾ.13ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ ಮತ್ತು ಗೃಹವಿಜ್ಞಾನ
- ಮಾ.15ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಕಶಾಸ್ತ್ರ
- ಮಾ.16ರಂದು ಸಂಖ್ಯಾಶಾಸ್ತ್ರ ಮತ್ತು ವಿದ್ಯುನ್ಮಾನ ಶಾಸ್ತ್ರ
- ಮಾ.17ರಂದು ಹಿಂದಿ
- ಮಾರ್ಚ್ 18ರಂದು ಇತಿಹಾಸ ಪರೀಕ್ಷೆಯೊಂದಿಗೆ ಪರೀಕ್ಷೆ-1 ಮುಕ್ತಯಗೊಳ್ಳಲಿದೆ.
- ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಸಲು ನಿರ್ಧಾರಿಸಿದೆ. ಹಿಂದೂಸ್ತಾನಿ ಸಂಗೀತ ಮತ್ತು ಕೆಲವು ವೃತ್ತಿಪರ ವಿಷಯಗಳಿಗೆ 2 ಗಂಟೆ 15 ನಿಮಿಷ ಪರೀಕ್ಷಾ ಅವಧಿ ನಿಗದಿ ಪಡಿಸಲಾಗಿದೆ.
