ಬೆಳ್ತಂಗಡಿ : ವಕೀಲರ ಸಂಘ (ರಿ.) ಬೆಳ್ತಂಗಡಿ, ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ (ರಿ.), ಶ್ರೀ ಗುರುದೇವ ಪ. ಪೂ. ಕಾಲೇಜು ಕಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನಾಚರಣೆ ಹಾಗೂ ಪೋಕ್ಸೋ ಕಾಯಿದೆ ಕುರಿತು ಕಾನೂನು ಮಾಹಿತಿ ಕಾನೂನು ಅರಿವು ಕಾರ್ಯಕ್ರಮವು ಇಂದು ಸೋಮವಾರ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ನಡೆಯಲಿದೆ.
ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ. ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಕಾಲೇಜಿನ ಪ್ರಾಚಾರ್ಯರಾದ ಸುಕೇಶ್ ಕುಮಾರ್ ಕೆ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಕೀಲರ ಸಂಘದ ಅಧ್ಯಕ್ಷರು ಸೇರಿದಂತೆ ಹಲವು ಅತಿಥಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.





