ಬಿದಿರು ಕೃಷಿ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ,ಜನವರಿ10:
2020-21ನೇ ಸಾಲಿನ ಸಂವಿಧಾನ ಅನುಚ್ಛೇದ 275(1) ರಡಿಯಲ್ಲಿ ಅನುಮೋದನೆಗೊಂಡಿರುವ ಬಿದಿರು ಕೃಷಿ (cultivation of Bamboo)  ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಎನ್‍ಎಫ್‍ಎಪಿ ಬೊಂಬೊ ಮಿಷನ್ ಅರಣ್ಯ ಇಲಾಖೆ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಆರ್‍ಟಿಸಿ/ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಹೊಂದಿದವರಿಗೆ ಬಿದಿರು ಕೃಷಿ ಮಾಡಲು ಪ್ರೋತ್ಸಾಹಿಸಲು ಪ್ರತಿ ಎಕರೆಗೆ ಪ್ರತಿ ವರ್ಷ ರೂ.18,000/-ಗಳನ್ನು ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. ಜ.18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಚಿತ್ರದುರ್ಗ ಜಿಲ್ಲೆಗೆ 36 ಭೌತಿಕ ಗುರಿಯನ್ನು ನಿಗಧಿಪಡಿಸಲಾಗಿದೆ. ಇದೇ ಜನವರಿ 17ರವರೆಗೆ ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕ ಕಚೇರಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹೊಸದುರ್ಗ, ಹಿರಿಯೂರು, ಹೊಳಲ್ಕೆರೆ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಳ್ಳಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರು ಇಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜ.18ರಂದು ಸಂಜೆ 5.30ರೊಳಗಾಗಿ ಸಂಬಂಧಪಟ್ಟ ಆಯಾ ತಾಲ್ಲೂಕಿನ ಕಚೇರಿಗೆ ಸಲ್ಲಿಸಲು ತಿಳಿಸಿದೆ.
ಷರತ್ತುಗಳು: ಅರ್ಜಿದಾರರು ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಕುರಿತು ಪಹಣಿ ಲಗತ್ತಿಸಬೇಕು. ಅರಣ್ಯ ಹಕ್ಕು ಅಧಿನಿಯಮದಡಿ ನೀಡಿರುವ ಹಕ್ಕು ಪತ್ರ ಲಗತ್ತಿಸುವುದು. ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಲಗತ್ತಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours