ವೇಣೂರು: ಇಲ್ಲಿಯ ಮೂಡುಕೋಡಿಯ ಪಂಜಾಲ್ಬೈಲು ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದ ಪರಿಣಾಮ ೨೬ ವರ್ಷದ ಯುವಕ ಮೃತಪಟ್ಟಿದ್ದಾರೆ.
ಪೆರಾಡಿ ಗ್ರಾಮದ ನಿವಾಸಿ ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ವೇಣೂರಿನ ಆಭರಣ ಅಂಗಡಿಯಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿಯಲ್ಲಿ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಸ್ವಸ್ತಿಕ್ ಅವರ ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



