ಬೆಂಗಳೂರು, ನವೆಂಬರ್ 04: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಯೋಜನೆಯ 34, 35 ಮತ್ತು 36ನೇ ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ. ಮೂರು ಕಂತುಗಳ ಒಟ್ಟು 7,405.86 ಕೋಟಿ ರೂ ಹಣ ಬಿಡುಗಡೆಗೆ ಆದೇಶಿಸಲಾಗಿದ್ದು, ಆ ಮೂಲಕ ರಾಜ್ಯದ ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬದ ಗಿಫ್ಟ್ ಸಿಕ್ಕಿದೆ.


34, 35 ಮತ್ತು 36ನೇ ಕಂತುಗಳ ಹಣ ಬಿಡುಗಡೆ
ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ 33 ಕಂತುಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಇದೀಗ 34ನೇ ಕಂತಿನ 2,500 ಕೋಟಿ ರೂ, 35ನೇ ಕಂತಿನ 2,452.93 ಕೋಟಿ ರೂ ಹಾಗೂ 36ನೇ ಕಂತಿನ 2,452.93 ಕೋಟಿ ರೂ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಆದೇಶಿಸಲಾಗಿದೆ.

