ರೇಷನ್ ಕಾರ್ಡ್ ಇ-ಕೆವೈಸಿ ಇನ್ನೂ ಮಾಡಿಸದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆ ಗಡುವನ್ನು ಮತ್ತೆ ವಿಸ್ತರಿಸಿದ್ದು, ನವೆಂಬರ್ 30ರವರೆಗೆ ಅವಕಾಶ ನೀಡಿದೆ. ಅನ್ನಸೇವೆ ಆ್ಯಪ್ ಮೂಲಕ ಮನೆಯಲ್ಲೇ ಅಥವಾ ನ್ಯಾಯಬೆಲೆ ಅಂಗಡಿಗೆ ಹೋಗಿ ಇ-ಕೆವೈಸಿ ಮಾಡಿಸಬಹುದು.


