ಸರ್ಕಾರಿ ನೌಕರರಿಗೆ ಕೋವಿಡ್ ದೃಢವಾದರೆ ವಿಶೇಷ ರಜೆಗೆ ಅನುಮತಿ.

 

 

 

 

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕೊರೋನಾ ವೈರಸ್‌ ಸೋಂಕಿಗೆ ಒಳಗಾದರೆ ಅಂತವರಿಗೆ ಮನೆಯಲ್ಲಿ ಪ್ರತ್ಯೇಕವಾಗಿರಲು ಅಥವಾ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅವಕಾಶ ಇದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಸಧ್ಯ ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆಯು ಇಳಿಮುಖವಾಗಿದ್ದು, ಇದಕ್ಕೆ ತುತ್ತಾದವರು ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ಪ್ರಮಾಣದಲ್ಲಿಯೂ ಗಣನೀಯವಾಗಿಯೂ ಇಳಿಮುಖವಾಗುತ್ತಿದೆ.

 

 

ಒಂದು ವೇಳೆ ರಾಜ್ಯ ಸರ್ಕಾರಿ ನೌಕರರು ಕೋವಿಡ್ ತಗುಲಿದರೆ ಅವರಿಗೆ ಸಂದರ್ಭನುಸಾರ ವಿಶೇಷ ಸಾಂದರ್ಭಿಕ ರಜೆಯನ್ನು ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರವು ರಜೆ ಮಂಜೂರು ಮಾಡಬಹುದಾಗಿದೆ.

ಇನ್ನು ಸರ್ಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರಿಗೆ ಕೋವಿಡ್ ಸೋಂಕಿಗೆ ಒಳಗಾದರೆ, ಅಥವಾ ಸರ್ಕಾರಿ ನೌಕರನು ವಾಸಿಸುವ ಪ್ರದೇಶದಲ್ಲಿ ಕಂಟೇನ್ಮೆಂಟ್ ಪ್ರದೇಶವೆಂದು ಘೋಷಿಸಿದರೆ ಅಂತ ಪ್ರದೇಶದಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ ಅಂತಹ ಸರ್ಕಾರಿ ನೌಕರರಿಗೆ ಗರಿಷ್ಠ 7 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬಹುದು.

[t4b-ticker]

You May Also Like

More From Author

+ There are no comments

Add yours