ಚಿತ್ರದುರ್ಗ,ಫೆಬ್ರವರಿ2:
ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಮತ್ತು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಎನ್.ಕಾಶೀ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಪಟ್ಟಣ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಮಂಗಳವಾರ ದಾಳಿ ನಡೆಸಿ ದಂಡ ವಿಧಿಸಿದೆ.
ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.
ಕೋಟ್ಪಾ-2003ರ ಕಾಯ್ದೆಗೆ ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 27 ಕೇಸುಗಳನ್ನು ದಾಖಲಿಸಿ ರೂ. 2750 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 4 ಕೇಸುಗಳನ್ನು ದಾಖಲಿಸಿ ರೂ. 350 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 2 ಕೇಸುಗಳನ್ನು ದಾಖಲಿಸಿ ರೂ. 300 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೋಡಿ ಭೀಮರಾಯ, ಎಎಸ್ಐ ಆರ್.ಕೆ.ತಿಪ್ಪೇಸ್ವಾಮಿ, ಹೆಡ್ಕಾನ್ಸ್ಟೇಬಲ್ ಕೆ.ಜಿ.ನಂದೀಶ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರುದ್ರಮುನಿ ಇದ್ದರು.
[t4b-ticker]
+ There are no comments
Add yours