ರಾಜ್ಯ ಕಾರ್ಮಿಕರಿಗೆ ಸಿಹಿ ಸುದ್ದಿ, ಯಂತ್ರ ಯೋಜನೆ ಜಾರಿಗೆ

 

 

 

 

ಬೆಂಗಳೂರು : ರಾಜ್ಯ ಸರ್ಕಾರವು ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಾರ್ಮಿಕರಿಗೆ ಸ್ವ ಉದ್ಯೋಗ ಮಾಡುವ ದೃಷ್ಟಿಯಿಂದ ಮುಂಬರುವ ಬಜೆಟ್ ನಲ್ಲಿ ಹೊಲಿಗೆಯಂತ್ರ ನೀಡುವ ಯೋಜನೆ ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

 

 

ಈ ಕುರಿತು ಮಾಹಿತಿ ನೀಡಿರುವ ಸಚಿವ ಶಿವರಾಮ ಹೆಬ್ಬಾರ್, ಕಾರ್ಮಿಕರಿಗೆ ಹೊಲಿಗೆ ಯಂತ್ರ ಯೋಜನೆ ಜಾರಿಗೆ 15 ಕೋಟಿ ರೂ. ಮೀಸಲಿಡಲಾಗಿದೆ. ತಾತ್ಕಾಲಿಕ ವಸತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಂಡಳಿಯಲ್ಲಿ 28,94,389 ಕಾರ್ಮಿಕರು ನೋಂದಣಿಯಾಗಿದ್ದಾರೆ. ಕಾರ್ಮಿಕ ಕಲ್ಯಾಣಕ್ಕಾಗಿ 19 ವಿವಿಧ ಯೋಜನೆಗಳಿವೆ ಎಂದರು.

  • ಕಾರ್ಮಿಕರಿಗೆ ಶ್ರಮ ಸಾಮರ್ಥ್ಯ ಟೂಲ್ ಕಿಟ್ ಗಳ ವಿತರಣೆ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಹಾಗೂ ಕಾರ್ಮಿಕರ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳ ಯೋಜನೆಗೆ 70 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.
[t4b-ticker]

You May Also Like

More From Author

+ There are no comments

Add yours