ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಇದರ ಆಶ್ರಯದಲ್ಲಿ ನ.23ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ವಿದ್ಯಾರ್ಥಿನಿ ಧನುಶ್ರೀ ವಿ. ಕುಲಾಲ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಅತ್ಯುತ್ತಮ ಮಾತುಗಾರಿಕೆ ಮತ್ತು ವಿಷಯ ಮಂಡನೆಯ ಮೂಲಕ ಗಮನ ಸೆಳೆದ ಧನುಶ್ರೀ, ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುವ ಮೂಲಕ ಶಾಲೆ ಹಾಗೂ ವೇಣೂರು ಭಾಗಕ್ಕೆ ಕೀರ್ತಿ ತಂದಿದ್ದಾಳೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಧನುಶ್ರೀ ವಿ. ಕುಲಾಲ್ ಅವರಿಗೆ ಉಪಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ಎಸ್.ಡಿ.ಎಂ.ಸಿ., ಸರ್ಕಾರಿ ಪ್ರೌಢ ಶಾಲೆ ವೇಣೂರು ಇವರು ಹಾರ್ದಿಕ ಅಭಿನಂದನೆ ಸಲ್ಲಿಸಿ, ಮುಂದಿನ ಸ್ಪರ್ಧೆಯಲ್ಲೂ ಯಶಸ್ಸು ಲಭಿಸಲಿ ಎಂದು ಶುಭ ಹಾರೈಸಿದ್ದಾರೆ.




