ಪ್ರಾಂಶುಪಾಲರ ನೇಮಕ ನಿಯಮಕ್ಕೆ ಬದಲಾವಣೆ:ಶೀಘ್ರವೇ 310 ಪ್ರಾಂಶುಪಾಲರ ಹುದ್ದೆಗಳ ಭರ್ತಿ

 

 

 

 

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ನೇಮಕಾತಿಗೆ ನಿಗದಿಪಡಿಸಿದ್ದ ಗರಿಷ್ಠ ವಯೋಮಿತಿಯನ್ನು ರದ್ದುಪಡಿಸಿದ್ದು, ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು ನಿಯಮಗಳಿಗೆ ತಿದ್ದುಪಡಿ ತಂದು ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಶೀಘ್ರವೇ 310 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಚಾಲನೆ ಸಿಗಲಿದೆ.

ರಾಜ್ಯಾದ್ಯಂತ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 435 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. 2009 ಕ್ಕಿಂತ ಹಿಂದೆ ಈ ಕಾಲೇಜುಗಳಿಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಪ್ರಾಂಶುಪಾಲರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಈ ಹಿಂದೆ ಸೇವಾ ಬಡ್ತಿ ಮೂಲಕ ಪ್ರಾಂಶುಪಾಲರಾಗಿದ್ದವರು ಸೇವೆಯಿಂದ ನಿವೃತ್ತಿಗೊಂಡಿದ್ದು, ಸದ್ಯ 435 ಕಾಲೇಜುಗಳಲ್ಲೂ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ.

 

 

ಕಾಲೇಜುಗಳ ಆಡಳಿತಕ್ಕಾಗಿ ಹಿರಿಹ ಸಹ ಪ್ರಾಧ್ಯಾಪಕರನ್ನು ಪ್ರಭಾರ ಪ್ರಾಂಶುಪಾಲರನ್ನಾಗಿ ನೇಮಕ ಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ 2020 ರಲ್ಲಿ ಸರ್ಕಾರ ಘೋಷಿಸಿದ್ದು, ಸದ್ಯ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವೇ 310 ಪ್ರಾಂಶುಪಾಲರ ಹುದ್ದೆಗಳ ಭರ್ತಿ ಕಾರ್ಯ ನಡೆಯಲಿದೆ.

 

[t4b-ticker]

You May Also Like

More From Author

+ There are no comments

Add yours