ಇಂದಿನ ರಾಶಿ ಭವಿಷ್ಯ,ಈ ರಾಶಿಯವರಿಗೆ ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ?

 

 

 

 

ಮೇಷ: ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭಸಂಖ್ಯೆ: 7

ವೃಷಭ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭಸಂಖ್ಯೆ: 1

ಮಿಥುನ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭಸಂಖ್ಯೆ: 9

ಕರ್ಕ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭಸಂಖ್ಯೆ: 4

ಸಿಂಹ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭಸಂಖ್ಯೆ: 7

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭಸಂಖ್ಯೆ: 5

 

 

ತುಲಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭಸಂಖ್ಯೆ: 3

ವೃಶ್ಚಿಕ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭಸಂಖ್ಯೆ: 2

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭಸಂಖ್ಯೆ: 8

ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭಸಂಖ್ಯೆ: 4

ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭಸಂಖ್ಯೆ: 1

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭಸಂಖ್ಯೆ: 6

[t4b-ticker]

You May Also Like

More From Author

+ There are no comments

Add yours