ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಮೇಲುಗೈ ಸಾಧಿಸಬೇಕು : ಡಾ.ಚನ್ನಕೇಶವ

 

 

 

 

ಚಿತ್ರದುರ್ಗ, ಮಾರ್ಚ್08:
ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಅತಿಹೆಚ್ಚು ಮೇಲುಗೈ ಸಾಧಿಸಬೇಕೆಂದು ಈ ನಿಟ್ಟಿನಲ್ಲಿ ಕಾಲೇಜಿನ ಹಂತದಲ್ಲಿಯೇ ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಚನ್ನಕೇಶವ.ಸಿ. ಸಲಹೆ ನೀಡಿದರು.
ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಚಿತ್ರಹಳ್ಳಿ ಸ.ಪ್ರ.ದ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಯಶೋಧ.ಸಿ.ವೈ ಮಾತನಾಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆ, ಪ್ರಾಮುಖ್ಯತೆ ಹಾಗೂ ಕಾರ್ಯಕ್ರಮವನ್ನು ಉದ್ದೇಶಿಸಿ ಲಿಂಗ ಸಮಾನತೆ, ಸ್ತ್ರೀ ಸ್ವಾತಂತ್ರ್ಯ ಹಾಗೂ ಪುರುಷ & ಸ್ತ್ರೀಯರ ನಡುವಿನ ಅಸಮಾನತೆಯನ್ನು ಹೋಗಲಾಡಿಸಲು ಯುವ ಮಹಿಳಾ ತಂಡ ಹೋರಾಡಬೇಕೆಂದು ತಿಳಿಸಿದರು.
ಚಿತ್ರದುರ್ಗ ನಗರಸಭೆ ಸದಸ್ಯರಾದ ಮೀನಾಕ್ಷಿ.ಪಿ.ಕೆ ಮಾತನಾಡಿ ಸ್ತ್ರೀಯರು ರಾಜಕೀಯ ಸ್ವಾತಂತ್ರ್ಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಹಭಾಗಿತ್ವ ವ್ಯಕ್ತಪಡಿಸಬೇಕು ಎಂದು ಹೇಳಿದರು.
ಚಿತ್ರದುರ್ಗ ನಗರಸಭೆ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ತಾರಕೇಶ್ವರಿ ಎಸ್.ಸಿ ಅವರು ವಿದ್ಯಾರ್ಥಿನಿಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಲೀಲಾವತಿ.ಆರ್ ಮಹಿಳಾ ಸಬಲೀಕರಣ ಘಟಕ ಮತ್ತು ರೇಂಜರ್ ಘಟಕವನ್ನು ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪ್ರೊ.ಮಂಜುನಾಥ.ಬಿ, ಶಕುಂತಲ ಹೆಚ್, ಪ್ರೊ.ಬಸವರಾಜ ಸಿ, ಡಾ. ಮಲ್ಲಿಕಾರ್ಜುನ ಬಿ, ಪ್ರೊ. ಡಿ.ಓ.ಸಿದ್ದಪ್ಪ, ಪ್ರೊ. ಕುಮಾರಸ್ವಾಮಿ.ಬಿ.ಹೆಚ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
======

 

 

[t4b-ticker]

You May Also Like

More From Author

+ There are no comments

Add yours