ಶಿವಮೊಗ್ಗ, ನ. 26: ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುವ ಘಟನೆ ಶಿವಮೊಗ್ಗಲ್ಲಿ ನಡೆದಿದೆ.
ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪತಿ ಮತ್ತು ಆತನ ಕುಟುಂಬಸ್ಥರು ಎಸ್ಕೇಪ್ ಆಗಿದ್ದಾರೆ. ಪತಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಹೊಳೆಹೊನ್ನೂರು ಪೊಲೀಸರು ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳ ನಿರ್ಧಾರದಿಂದ ಪೋಷಕರು ಕಂಗಾಲಾಗಿದ್ದು, ನಾಲೆ ಬಳಿ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.





