ನಿಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ಬಿಗ್ ಶಾಕ್

 

ಬೆಂಗಳೂರು: ವಿವಿಧ ಇಲಾಖೆಗಳಿಗೆ ನಿಯೋಜನೆ ಮೇರೆಗೆ ತೆರಳಿ, ಐದು ವರ್ಷ ಪೂರೈಸಿದ ಸಿಬ್ಬಂದಿ, ಅಧಿಕಾರಿಗಳನ್ನು ಕೂಡಲೇ ಮಾತ್ರು ಇಲಾಖೆಗೆ ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ಓದಿ: ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಈ ಮೂಲಕ ಐದು ವರ್ಷ ನಿಯೋಜನೆ ಪೂರೈಸಿದ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆಯಲ್ಲಿ ಸರ್ಕಾರಿ ನೌಕರರ ನಿಯೋಜನೆಗೆ ಸಂಬಂಧಿಸಿದಂತೆ ಹಲವು ಸೂಚನೆ ನೀಡಲಾಗಿದ್ದು, ನಿಯೋಜನೆ ಮೇರೆಗೆ ಬೇರೆ ಇಲಾಖೆಗೆ ತೆರಳುವವರ ನಿಯೋಜನೆ ಅವಧಿಯನ್ನು 5 ವರ್ಷಗಳಿಗಿಂತ ಹೆಚ್ಚಿನ ಅವಧಿಗೆ ವಿಸ್ತರಿಸಬಾರದು ಎಂದು ತಿಳಿಸಿದೆ.

ಇದಲ್ಲದೇ ನಿಯೋಜನೆ ಮೇರೆಗೆ ಐದು ವರ್ಷದ ಅವಧಿಗೆ ತೆರಳಿದ ನಂತ್ರ 2 ವರ್ಷ ಮಾತೃ ಇಲಾಖೆಯಲ್ಲಿ ಕೆಲಸ ಮಾಡಬೇಕು. ಈಗಾಗಲೇ ನಿಯೋಜನೆ ಮೇಲೆ ತೆರಳಿ 5 ವರ್ಷ ಪೂರೈಸಿರುವ ಸಿಬ್ಬಂದಿ, ಅಧಿಕಾರಿಗಳನ್ನು ಮಾತೃ ಇಲಾಖೆಗೆ ಕರೆಸಿಕೊಳ್ಳುವಂತೆ ತಿಳಿಸಲಾಗಿದೆ.

ಓದಿ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಯಾಗಿ ಓ.ಪರಮೇಶ್ವರಪ್ಪ ನೇಮಕ

ಇದಲ್ಲದೇ ವೃಂದ ಮತ್ತು ನೇಮಕಾತಿಯಲ್ಲಿ ಬೇರೆ ಇಲಾಖೆಯಿಂದ ನಿಯೋಜನೆಗೆ ಅವಕಾಶ ಕಲ್ಪಿಸದಿರುವ ಹುದ್ದೆಗಳಿಗೆ ಯಾವುದೇ ಸಿಬ್ಬಂದಿ ಅಥವಾ ಅಧಿಕಾರಿಗಳನ್ನು ನಿಯೋಜನೆ ಮಾಡದಂತೆ ಖಡಕ್ ಸೂಚನೆ ನೀಡಿದೆ.

[t4b-ticker]

You May Also Like

More From Author

+ There are no comments

Add yours