ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕಾವೇರಿ ನದಿಯ ಕೆಆರ್ಎಸ್ ಜಲಾಶಯದಲ್ಲಿ ನೀರಿಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಇಂದು (ಜುಲೈ 28) ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ.

.ಇಂದು (ಜುಲೈ 28) ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery Water Regulation Committee – CWRC) ಮುಂದಿನ 15 ದಿನಗಳ ಕಾಲ ನಿರಂತರವಾಗಿ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಸೂಚಿಸಿದೆ.
ವರ್ಚ್ಯುವಲ್ ಮೂಲಕ ಕರ್ನಾಟಕ, ತಮಿಳುನಾಡು ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಆದೇಶ ಮಾಡಿದೆ. ಪ್ರತಿ ದಿನ 3,500 ಕ್ಯೂಸೆಕ್ನಂತೆ 15 ದಿನಗಳಲ್ಲಿ ಒಟ್ಟು 4 ಟಿಎಂಸಿ ನೀರು ಹರಿಸಲು ಸಿಡಬ್ಲ್ಯೂಆರ್ಸಿ ಹೇಳಿದೆ. ಆದ್ರೆ ಇದಕ್ಕೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ರಾಜ್ಯವು ಹಿಂದೆಂದೂ ನೋಡಿರದ ಮಳೆಯ ಕೊರತೆಯನ್ನು ಎದುರಿಸುತ್ತಿದೆ ಎಂದು ಕರ್ನಾಟಕ ಬಲವಾದ ಮಂಡಿಸಿದೆ. ರಾಜ್ಯದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದರೂ ಸಹ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದಿನ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿರುವುದು ನಿಜಕ್ಕೂ ಕಳವಳಕಾರಿಯಾಗಿದೆ.
ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಜಲಾಶಯಗಳು ಬರಿದಾಗಿದ್ದರೂ, ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ಕರ್ನಾಟಕದ ವಾದವನ್ನು ಪರಿಗಣಿಸದ ಈ ಆದೇಶದಿಂದಾಗಿ ರಾಜ್ಯದ ರೈತರು ಹಾಗೂ ಬೆಂಗಳೂರು ಸೇರಿದಂತೆ ಹಲವು ನಗರಗಳ ಜನರಲ್ಲಿ ಆತಂಕ ಮೂಡಿಸಿದೆ.
ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ನೀರಾವರಿ ಸಚಿವ ರಾಮಲಿಂಗಾರೆಡ್ಡಿ, ಇಂದು ಕಾವೇರಿ ನೀರು ನಿರ್ವಹಣಾ ಸಮಿತಿ ಇತ್ತು. ಸಭೆಯಲ್ಲಿ 3500 ಕ್ಯೂಸೆಕ್ ನೀರು 15 ದಿನ ಬಿಡುವಂತೆ ಹೇಳಿದ್ದಾರೆ. 4 ಟಿಎಂಸಿ ನೀರು ನಮಗೆ ಬೇಕಾಗುತ್ತೆ. ಹೀಗಿರುವಾಗ, ನಾವು CWMAಗೆ ಅಪೀಲು ಹಾಕಬಹುದು. ಇದರ ಬಗ್ಗೆ ಖುದ್ದಾಗಿ ಸಿಎಂ ಜತೆ ಮಾತಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.



