ಬೆಳ್ತಂಗಡಿ: ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ ೪ ಗಂಟೆಗೆ ಧನುಪೂಜೆಗೆಂದು ಹೊರಟಿದ್ದ ಸುಮಂತ್ ಗೂಢ ನಾಪತ್ತೆಯಾಗಿದ್ದು, ಇದೀಗ ಕೆರೆಯಲ್ಲಿ ಶವ ಪತ್ತೆಯಾಗಿದೆ.
ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿ ಸುಮಂತ್ (೧೫ವ) ಮೃತನಾಗಿರುವ ದುರ್ದೈವಿ. ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ದೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು, ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದ್ದರು.





