ಬುಡಕಟ್ಟು ವೀರನ ಕ್ಷೇತ್ರ ಮಿಂಚೇರಿ ಕಡೆ ಹೊರಟ ನಾಯಕರ ದಂಡು

 

ಮಿಂಚೇರಿ ಜಾತ್ರೆಗೆ ಸಂಭ್ರಮದ ಚಾಲನೆ

ಚಿತ್ರದುರ್ಗ:“ಎತ್ತಿನ ಗಾಡಿ ಏರೋಣ ಬನ್ನಿ ಮಿಂಚೇರಿ ಯಾತ್ರೆ ಮಾಡೋಣ ಬನ್ನಿ’ ಎಂಬ ಹರ್ಷೋದ್ಘಾರದೊಂದಿಗೆ ಮ್ಯಾಸ ಬೇಡ  ಬುಡಕಟ್ಟು  (tribe)ಸಂಸ್ಕೃತಿಯ ಮ್ಯಾಸ ನಾಯಕ ಸಮುದಾಯದ ದಂಡು  ಮಿಂಚೇರಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಶನಿವಾರ ಸಾಲು ಸಾಲು ಎತ್ತಿನಗಾಡಿಗಳಲ್ಲಿ  ಸಂಭ್ರಮದಿ ತೆರಳಿದರು.
ನೂರಾರು ಎತ್ತಿನಗಾಡಿಗಳಲ್ಲಿ ತೆರಳುವ ಮಿಂಚೇರಿ ಜಾತ್ರೆ ತನ್ನದೇ ಆದ ವೈಶಿಷ್ಟ ಹೊಂದಿದೆ. ಬುಡಕಟ್ಟು ಸಂಸ್ಕೃತಿಯ ಈ ಆಚರಣೆ ಆಧುನಿಕತೆಯ ಸ್ಪರ್ಶವನ್ನೂ ಪಡೆದುಕೊಂಡಿದೆ.
ಬಚ್ಚಬೋರನಹಟ್ಟಿಯಲ್ಲಿ ಶನಿವಾರ ದೇವರ ಮಜ್ಜನ ಬಾವಿಯಲ್ಲಿ ಗುರು ಹಿರಿಯರೊಂದಿಗೆ ಗಂಗಾಪೂಜೆ ನೆರವೇರಿಸಿ ಮಿಂಚೇರಿ ಯಾತ್ರೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ಬಚ್ಚಬೋರನಹಟ್ಟಿಯಿಂದ ಸಾಗುವ ಮಾರ್ಗ

ಬಚ್ಚಬೋರನಹಟ್ಟಿ ಮಾರ್ಗವಾಗಿ ಗೋನೂರು ರಾಷ್ಟ್ರೀಯ ಹೆದ್ದಾರಿ ಮೂಲಕ ಚಿತ್ರದುರ್ಗ, ಸೀಬಾರ, ಗೂಳಯ್ಯನಹಟ್ಟಿ, ಕ್ಯಾಸಾಪುರ, ಕಡ್ಲೆಗುದ್ದು, ಮೇಗಳಹಟ್ಟಿ, ಕೋಣನೂರು, ಚುಕ್ಕೇನಹಳ್ಳಿ, ಸಿರಿಗೆರೆ, ಮದಕರಿಪುರ ಹಾಗೂ ಮಿಂಚೇರಿಪುರದವರೆಗೆ ಎತ್ತಿನಬಂಡಿ ಯಾತ್ರೆ ನಡೆಯಲಿದೆ. ಮ್ಯಾಸ ನಾಯಕ ಸಮುದಾಯದ ಸಾಂಸ್ಕೃತಿಕ ವೀರ ಎಂಬ ಖ್ಯಾತಿಯ  ಗಾದ್ರಿಪಾಲ ನಾಯಕ ಸ್ವಾಮಿಯ ಹೆಸರಿನಲ್ಲಿ ಸಾಲು ಸಾಲಾಗಿ ಹೊರಟ ಎತ್ತಿನ ಗಾಡಿಗಳು ಕಣ್ಮನ ಜನರ ಕಣ್ಮನ ಸೆಳೆಯಿತು.

ಏನಿದು ಮಿಂಚೇರಿ ಜಾತ್ರೆ?

ಬುಡಕಟ್ಟು ಸಂಸ್ಕೃತಿಯ ಮ್ಯಾಸ ನಾಯಕ ಎಂದೇ ಹೆಸರಾಗಿರುವ ಗಾದ್ರಿಪಾಲ ನಾಯಕ ತಾಲೂಕಿನ ಸಿರಿಗೆರೆ ಬಳಿಯ ಮೆದಕರಿಪುರ ಗ್ರಾಮದ ಬಳಿಯ ಕಾಡಿನಲ್ಲಿ ಹುಲಿಯ ಜತೆ ಸೆಣಸಾಡಿ ಮರಣ ಹೊಂದಿದ ಎಂಬ ಪ್ರತೀತಿ ನಾಯಕ ಸಮುದಾಯದವರಲ್ಲಿದೆ. ಈ ಕಾರಣದಿಂದ ಪ್ರತಿ ಐದು ವರ್ಷಗಳಿಗೆuಟಿಜeಜಿiಟಿeಜಮ್ಮೆ ಮಿಂಚೇರಿ ಜಾತ್ರೆ ಆಚರಿಸಲಾಗುತ್ತಿದೆ.
ಈ ಯಾತ್ರೆಗೆ ಸಾವಿರಾರು ಮಂದಿ ತಮ್ಮ ಸಂಬಂಧಿಕರೊಂದಿಗೆ ಸಂಪ್ರದಾಯದಂತೆ ಎತ್ತಿನಗಾಡಿಗಳಲ್ಲಿ ತೆರಳುತ್ತಾರೆ. ಆಧುನಿಕ ಭರಾಟೆಗೆ ಸಿಲುಕಿ ಸಂಪ್ರದಾಯಗಳು ನಶಿಸಿಹೋಗುತ್ತಿರುವ ಸಂದರ್ಭದಲ್ಲೂ ಮಿಂಚೇರಿ ಯಾತ್ರೆ ಮಾತ್ರ ಗ್ರಾಮೀಣ ಸೊಗಡನ್ನು ಉಳಿಸಿಕೊಂಡಿರುವುದು ಬುಡಕಟ್ಟು ಸಂಸ್ಕೃತಿಯ ಗಟ್ಟಿತನವನ್ನು ಪ್ರತಿಬಿಂಬಿಸುತ್ತಿದೆ.
ಮಿಂಚೇರಿ ಪಯಣ: ತಾಲೂಕಿನ ಬಚ್ಚಬೋರನಹಟ್ಟಿಯಿಂದ ಮಿಂಚೇರಿ ಜಾತ್ರೆಗೆ ಪಯಣ ಆರಂಭವಾಗುತ್ತದೆ. ಇಲ್ಲಿ ಮ್ಯಾಸ
ನಾಯಕ ಸಮುದಾಯದ ಆರಾಧ್ಯ ದೈವ ಗಾದ್ರಿಪಾಲ ನಾಯಕನ ದೇವಸ್ಥಾನವಿದೆ. ಮಿಂಚೇರಿಗೆ ಹೊರಡುವ ಹಿಂದಿನ ದಿನವೇ ಜಿಲ್ಲೆಯ ವಿವಿಧೆಡೆಗಳಿಂದ ಎತ್ತಿನಗಾಡಿಗಳಲ್ಲಿ ಬರುವ ಭಕ್ತರು ಇಲ್ಲಿ ಬೀಡು ಬಿಡುತ್ತಾರೆ. ಇಲ್ಲಿಂದ ಹೊರಡುವ ಸಮಯದಲ್ಲಿ ಊಟಕ್ಕೆ ಬೇಕಾದ ಆಹಾರ ಪದಾರ್ಥಗಳನ್ನು ಕೊಂಡೆuಟಿಜeಜಿiಟಿeಜಯ್ಯುತ್ತಾರೆ.

ಆರು ದಿನಗಳ ಮಿಂಚೇರಿ ಜಾತ್ರೆ:

ಈ ಬಾರಿಯ ಮಿಂಚೆರಿ ಜಾತ್ರಾ ಮಹೋತ್ಸವ ೨೦೨೩ರ ಡಿಸೆಂಬರ್ ೨೩ ರಿಂದ ೨೮ ರವರೆಗೆ ಜರುಗಲಿದೆ. ಈ ಮಿಂಚೇರಿ ಜಾತ್ರೆಯಲ್ಲಿ ವಿಶಿಷ್ಟ ಆಚರಣೆಯನ್ನು ಕಾಣಬಹುದಾಗಿದ್ದು, ಬುಡಕಟ್ಟು ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾಗಲಿದೆ.
ಡಿಸೆಂಬರ್ ೨೩ರಂದು ಶನಿವಾರ ಉದಯ ಕಾಲಕ್ಕೆ ದೇವರ ಮುತ್ತಯ್ಯಗಳ ಆಗಮನವಾದ ನಂತರ ಬೆಳಿಗ್ಗೆ ೭ಕ್ಕೆ ದೇವರ ಮಜ್ಜನಬಾವಿಯಲ್ಲಿ ಗುರು-ಹಿರಿಯರೊಂದಿಗೆ ಗಂಗಾಪೂಜೆ ಹಾಗೂ ಬೆಳಿಗ್ಗೆ ೧೧.೩೦ಕ್ಕೆ ಮಿಂಚೇರಿ ಜಾತ್ರಾ  ಮಹೋತ್ಸವ ಆರಂಭವಾಗಲಿದೆ. ದೇವರ ಮುತ್ತಯ್ಯಗಳೊಂದಿಗೆ ಊರಿನಿಂದ ನಿರ್ಗಮಿಸಿ ಅಲ್ಲಿಂದ ಕಕ್ಕಲು ಬೆಂಚಲ್ಲಿ ಪೂಜೆ ಸಲ್ಲಿಸಿ, ಯಾತ್ರೆ ಮುಂದುವರೆಯುವುದು. ಶನಿವಾರ  ಸಂಜೆ ೭ಕ್ಕೆ ಕ್ಯಾಸಾಪುರದ ಬಯಲಿನಲ್ಲಿ ಸ್ವಾಮಿಗೆ ಪೂಜೆ ನಂತರ ಬೀಡು ಬೀಡುವುದು. ನಂತರ ರಾತ್ರಿ ಭಜನೆ, ಕೋಲಾಟ, ಸೋಬಾನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು.
ಡಿ: ೨೪ರಂದು ಬೆಳಿಗ್ಗೆ ೭ಕ್ಕೆ ಸಕಲ ಸದ್ಭಕ್ತರಿಂದ ಸ್ವಾಮಿಯ ಪೂಜೆ ನಂತರ ಯಾತ್ರೆ ಮುಂದುವರೆಯುವುದು. ಮಧ್ಯಾಹ್ನ ೧೨ಕ್ಕೆ ಸಿರಿಗೆರೆ ಡಿ.ಮದಕರಿಪುರ ವರತಿನಾಯಕನ ಕೆರೆಯ ದಂಡೆಯಲ್ಲಿ ವಿಶ್ರಾಂತಿ. ನಂತರ ಕೆರೆಯ ದಂಡೆಯಲ್ಲಿ ಪೂಜೆ ಮುಗಿಸಿಕೊಂಡು ಪಶುಪಾಲಕರಾದ ಗಾದ್ರಿಪಾಲನಾಯಕ ಸ್ವಾಮಿಯ ಸುಕ್ಷೇತ್ರ ಮಿಂಚೇರಿಗೆ ಪಯಣ ಬೆಳೆಸುತ್ತಾರೆ. ಸಂಜೆ ೫ಕ್ಕೆ ಸ್ವಾಮಿಯ ಮೀಸಲು ಹಾಲಿನ ಕಂಬಿಯ ಪೂಜೆ. ರಾತ್ರಿ ಗುರು-ಹಿರಿಯರ ಸಾಂಪ್ರದಾಯಿಕ ಪೂಜೆ ನಂತರ ಬೀಡು ಬಿಡಲಾಗುವುದು. ಮಧ್ಯರಾತ್ರಿ ಕಂಚವ್ವ ಕಾಮವ್ವರ ಚಿಲುಮೆ ಗಂಗಮ್ಮನ ಮಹಾಪೂಜೆ. ಕೋಲಾಟ, ಭಜನೆ, ಸೋಬಾನೆ ಹಾಗೂ ಇತರೆ ಕಾರ್ಯಕ್ರಮಗಳು ನಡೆಯುತ್ತವೆ.
ಡಿಸೆಂಬರ್ ೨೫ರಂದು ಬೆಳಿಗ್ಗೆ ೫ಕ್ಕೆ ಸ್ವಾಮಿಯ ಪೂರ್ವಿಕರ ವಿಧಿ-ವಿಧಾನಗಳೊಂದಿಗೆ ಹುಲಿರಾಯನ ಸಮಾಧಿಗೆ ಪೂಜೆ. ನಾಯಕನ ಸಮಾಧಿಗೆ ಪೂಜೆ ಹಾಗೂ ಮಣಿವು ಕಾರ್ಯಕ್ರಮ. ನಂತರ ಮಧ್ಯಾಹ್ನ ೨ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಬಸವಂತರಿಗೆ ಹಾಗೂ ಚೌಕು ಮಣೆವು ಕಾರ್ಯಕ್ರಮ. ಸಂಜೆ ೪ಕ್ಕೆ ಕಣಿವೆ ಮಾರಮ್ಮ, ಮಲಿಯಮ್ಮ ಹಾಗೂ ಕೊಲ್ಲಪುರದಮ್ಮನವರ ಗಂಗಾಪೂಜೆ. ಸಂಜೆ ೭ಕ್ಕೆ ಸ್ವಾಮಿಗೆ ಪೂಜೆ ನಂತರ ಭಕ್ತಾಧಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಡಿಸೆಂಬರ್ ೨೬ರಂದು ಬೆಳಿಗ್ಗೆ ೭ಕ್ಕೆ ಸ್ವಾಮಿಯು ಜಂಗಮ ಸ್ವರೂಪಿಯಾಗಿ ಭಿಕ್ಷೆ ಸ್ವೀಕಾರ ಕಾರ್ಯಕ್ರಮ. ಬೆಳಿಗ್ಗೆ ೧೧ಕ್ಕೆ ಸ್ವಾಮಿಯ ಸನ್ನಿಧಿಯಲ್ಲಿ ಪ್ರಸಾದ ದಾಸೋಹ. ಮಧ್ಯಾಹ್ನ ೨ಕ್ಕೆ ಮಿಂಚೇರಿ ಸುಕ್ಷೇತ್ರದಿಂದ ನಿರ್ಗಮನ. ರಾತ್ರಿ ೭ಕ್ಕೆ ಕಡ್ಲೇಗುದ್ದು ಬಳಿಯ ಸಿದ್ದರ ಗುಂಡಿಗೆ ಆಗಮನ. ನಂತರ ಸ್ವಾಮಿಗೆ ಪೂಜೆ ಸಲ್ಲಿಸಿ ಬೀಡು ಬಿಡುವುದು.
ಡಿಸೆಂಬರ್ ೨೭ರಂದು ಬೆಳಿಗ್ಗೆ ೭ಕ್ಕೆ ಸ್ವಾಮಿಗೆ ಪೂಜೆ ಸಲ್ಲಿಸಿ ಬೆಳಿಗ್ಗೆ ೧೦ಕ್ಕೆ ಕ್ಯಾಸಾಪುರ ಹತ್ತಿರ ಜನಿಗಿಹಳ್ಳದ ದಂಡೆಯಲ್ಲಿ ವಿಶ್ರಾಂತಿ ಮತ್ತು ಸ್ವಾಮಿಯ ಸಂಪ್ರಾದಾಯದAತೆ ಜನಿಗಿ ಹಳಕ್ಕೆ ಗಂಗಾಪೂಜೆ ನಡೆಯುತ್ತದೆ. ನಂತರ ಯಾತ್ರೆ ಮುಂದುವರೆಯಲಿದೆ. ಮಧ್ಯಾಹ್ನ ೨ಕ್ಕೆ ಗಂಡುಮೆಟ್ಟಿದ ನಾಡು ಚಿತ್ರದುರ್ಗಕ್ಕೆ ಮಿಂಚೇರಿ ಮಹೋತ್ಸವದ ಮೆರವಣಿಗೆ ಆಗಮನ. ನಂತರ ರಾಜಾ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ, ಕೋಲಾಟ, ಭಜನೆ, ಉರುಮೆ, ಕುಣಿತ, ತಮಟೆ, ವಾದ್ಯಗಳೊಂದಿಗೆ ಕಹಳೆಯ ನಾದದೊಂದಿಗೆ ಜನಪದ ನೃತ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ ೭ಕ್ಕೆ ಸುಕ್ಷೇತ್ ಕಕ್ಕಲು ಬೆಂಚಿನಲ್ಲಿ ಬೀಡು ಬಿಡುವುದು.
ಡಿಸೆಂಬರ್ ೨೮ರಂದು ಸಂಜೆ ೭ಕ್ಕೆ ಸ್ವಾಮಿಯ ಗ್ರಾಮದ ಹೊಸ್ತಿಲು ಪೂಜೆಯೊಂದಿಗೆ ಸ್ವಸ್ಥಾನಕ್ಕೆ ಮರಳುವುದು. ಗುರು-ಹಿರಿಯರೊಂದಿಗೆ ದೇವರ ಮುತ್ತಯ್ಯಗಳ ಬೀಳ್ಕೊಡುಗೆ ನಡೆಯಲಿದೆ.
೧೦೦ ಕ್ಕೂ ಹೆಚ್ಚು  ಎತ್ತಿನ ಗಾಡಿ: ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಸಾಲು ಎತ್ತು ಗಾಡಿಗಳ ಮಿಂಚೇರಿ ಯಾತ್ರೆಯಲ್ಲಿ ಈ ಬಾರಿ ಸುಮಾರು ೧೦೦ ಕ್ಕಿಂತ ಹೆಚ್ಚು  ಎತ್ತಿನ ಗಾಡಿಗಳು, 140 ಟ್ರಾಕ್ಟರ್, 69 ಟೆಂಪೋ  ಗಳನ್ನು ಹೂವುಗಳ ಮೂಲಕ  ಶೃಂಗಾರ ಮಾಡಿಕೊಂಡು ಯಾತ್ರೆ ಹೊರಟರು. ೩೫-೪೦ ಕಿ.ಮೀ ದೂರದಲ್ಲಿರುವ ಸಿರಿಗೆರೆ ಗ್ರಾಮದ ಹತ್ತಿರದ ಗಾದ್ರಿಪಾಲನಾಯಕ ದೇವಸ್ಥಾನಕ್ಕೆ ತೆರಳಿ ಎಡೆ ಅರ್ಪಿಸಿ, ಪೂಜೆ ಸಲ್ಲಿಸಿ ಬರುವುದು ಈ ಯಾತ್ರೆಯ ವಿಶೇಷ.

ಇದನ್ನೂ ಓದಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ CET ಪರೀಕ್ಷೆ ದಿನಾಂಕ ಪ್ರಕಟ

[t4b-ticker]

You May Also Like

More From Author

+ There are no comments

Add yours