ಬೆಂಗಳೂರು: ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,500ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,450ರೂಪಾಯಿ ಆಗಿದೆ.
100 ಗ್ರಾಮ್ ಬೆಳ್ಳಿ ಬೆಲೆ 7,350ರೂಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,500ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,325ರೂಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆ.14ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,500 ರೂ., 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,450 ರೂ ಹಾಗು ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ.ಇದೆ.
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ.
[t4b-ticker]
+ There are no comments
Add yours