ಅಯೋಧ್ಯೆಗೆ ಹೊರಟ ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳ ಸ್ವಾಮೀಜಿಗಳ ತಂಡ

 

ಚಿತ್ರದುರ್ಗ:ಐತಿಹಾಸಿಕ  ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22  ರಂದು ಜರುಗಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಿಂದ  ಜಿಲ್ಲೆಯ  ವಿವಿಧ ಮಠಾಧೀಶರು ಇಂದು ಪ್ರಯಾಣ ಬೆಳೆಸಿದರು.

ಅಯೋಧ್ಯೆಯ   ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಠಾಧೀಶರು ಪ್ರಯಾಣ ಮಾಡಿದ್ದಾರೆ. ನಗರದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹೊಸದುರ್ಗ ತಾಲೂಕಿನ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ , ಭಗೀರಥ ಗುರುಪೀಠದಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿರನ್ನು ಭಕ್ತರು ಗೌರವಿಸಿ ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.ಶ್ರೀ ಶಾಂತವೀರ ಸ್ವಾಮೀಜಿ ಹಾಗೂ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮುರುಘಾ ಮಠದಲ್ಲಿರುವ ಶ್ರೀ ಮುರುಗಿ ಶಾಂತವೀರ ಸ್ವಾಮಿಗಳ ಕರ್ತೃ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದು ಪೂಜೆ ಸಲ್ಲಿಸಿ ಅಯೋಧ್ಯೆಗೆ ತೆರಳಿದರು.ದಾವಣಗೆರೆ  ಜಿಲ್ಲೆಯ ಮಠಾಧೀಶರ ಜೊತೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹರಿಹರ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ಸೇರಿದ್ದಾರೆ..

ಇದನ್ನೂ ಓದಿ:ಜನವರಿ 23ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳಿರುವ ಮಠಾಧೀಶರು, ಅಲ್ಲಿಂದ ವಿಮಾನದ ಮೂಲಕ ಲಕ್ನೋ ತಲುಪಲಿದ್ದಾರೆ. ಲಕ್ನೋದಿಂದ ಅಯೋಧ್ಯೆಗೆ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ. ಅಯೋಧ್ಯೆಯಲ್ಲಿ ದೇಶದ ಸುಮಾರು 4 ಸಾವಿರ ಸಾಧು ಸಂತರು, ಗಣ್ಯರು ಸೇರಲಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾಹಿತಿ ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours