ಅಭಿಷೇಕ್ ಶರ್ಮಾ ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1,000 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಆಗಿದ್ದಾರೆ. 528 ಎಸೆತಗಳಲ್ಲಿ ಈ ಸಾಧನೆ ಮಾಡಿದ ಅವರು ಟಿಮ್ ಡೇವಿಡ್ ಅವರನ್ನು ಹಿಂದಿಕ್ಕಿದರು. ಆದರೆ ವಿರಾಟ್ ಕೊಹ್ಲಿಗಿಂತ ಒಂದು ಇನ್ನಿಂಗ್ಸ್ ಹೆಚ್ಚಿಗೆ ಆಡಿದರು. ಈ ಅದ್ಭುತ ಸಾಧನೆ ಭಾರತಕ್ಕೆ ಹೆಮ್ಮೆ ತಂದಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 11 ರನ್ ಕಲೆಹಾಕುವ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮೂಲಕ ಅಭಿಷೇಕ್ ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಟಿಮ್ ಡೇವಿಡ್ ಅವರನ್ನು ಹಿಂದಿಕ್ಕಿದ್ದಾರೆ. ಆದಾಗ್ಯೂ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯುವಲ್ಲಿ ಅಭಿಷೇಕ್ ವಿಫಲರಾದರು. ಇದರ ಜೊತೆಗೆ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ವೇಗವಾಗಿ 1,000 ರನ್ ಪೂರೈಸಿದ ವಿಶ್ವದ ಐದನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.









