ಮುರುಘಾ ಮಠದ ಬಳಿ ಲಾರಿ ಬೈಕ್ ಡಿಕ್ಕಿ ,ಒಬ್ಬ ಯುವಕ ಸಾವು

 

 

 

 

ಚಿತ್ರದುರ್ಗದ ಮುರುಘಾ ಮಠದ ಸಮೀಪ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಒರ್ವ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. 18 ವರ್ಷದ ನಿತೀಶ್ ಮೃತ ಯುವಕ ಎಂದು ಗುರುತಿಸಲಾಗಿದೆ. ಮೂರು ಮಂದಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರನ ಅತೀ ವೇಗ ಮತ್ತು  ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours