ಬೆಂಗಳೂರು: ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ:ಸಿಎಂ ಅವರಿಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

 

ಬೆಂಗಳೂರು ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು.ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದರು.

ಇದನ್ನೂ ಓದಿ: ಹನ್ನೆರಡು ಸಾವಿರ ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ಲೋಕಯುಕ್ತ ಬಲೆಗೆ

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು.

ಇದನ್ನೂ ಓದಿ: ಚಿತ್ರದುರ್ಗ:ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ವಿಕಲಚೇತನರಿಂದ ಅರ್ಜಿ

ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ , ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಶ್ರೀಗಳು ಹಾಗೂ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಉಪ ಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours