ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಉಚಿತ ತರಬೇತಿಗಳಿಗೆ ಪ್ರವೇಶ ಆರಂಭ

 

ಚಿತ್ರದುರ್ಗ:ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿರುವ ಪ್ರಧಾನಮಂತ್ರಿ ಕೌಶಲ್ಯ   (Pradhan Mantri Skill Centre)ಕೇಂದ್ರದಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಪ್ರವೇಶ ಆರಂಭವಾಗಿದೆ.

ಚಿತ್ರದುರ್ಗದ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರವು ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ, ನ್ಯಾಷನಲ್ ಸ್ಕಿಲ್ ಡೆವಲಪ್‍ಮೆಂಟ್ ಕಾರ್ಪೋರೇಷನ್ ಪ್ರಾಯೋಜಿತ, ಸ್ಕಿಲ್ ಇಂಡಿಯಾದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯ ವಿವಿಧ ಅಲ್ಪಾವಧಿಯ ಕೌಶಲ್ಯಭಿವೃದ್ಧಿ ತರಬೇತಿಗಳನ್ನು (ಟೈಲರಿಂಗ್, ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್, ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ಇತ್ಯಾದಿ) ಉಚಿತವಾಗಿ ನೀಡಲಾಗುತ್ತದೆ. ಈ ಎಲ್ಲಾ ತರಬೇತಿಗಳ ಜೊತೆಗೆ ಬೇಸಿಕ್ ಕಂಪ್ಯೂಟರ್, ಕಮ್ಯೂನಿಕೇಶನ್ ಸ್ಕಿಲ್ಸ್, ಉದ್ಯೋಗ ಸಂದರ್ಶನ, ಬೇಸಿಕ್ ಇಂಗ್ಲೀಷ್  ಇತ್ಯಾದಿ ವಿಷಯಗಳನ್ನು ಸಹ ಬೋಧಿಸಲಾಗುವುದು. ಈ ತರಬೇತಿಗಳು ಅಲ್ಪಾವಧಿಯಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಹಾಗೂ ವೃತ್ತಿಜೀವನದ ಬೆಳವಣಿಗೆಗೆ ಪೂರಕ ಮತ್ತು ಅಡಿಪಾಯವಾಗಿರುತ್ತವೆ. ಈ ತರಬೇತಿಗಳ ದಾಖಲಾತಿ ಪ್ರಾರಂಭವಾಗಿದ್ದು, ಉದ್ಯೋಗಕಾಂಕ್ಷಿಗಳು ಈ ಮಹತ್ವಪೂರ್ಣ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.

ಇದನ್ನೂ ಓದಿ: ಹನಿ ನೀರಾವರಿ ಅಳವಡಿಕೆಗೆ ಸಹಾಯಧನ: ಅರ್ಜಿ ಆಹ್ವಾನ

ಈಗಾಗಲೇ ಚಿತ್ರದುರ್ಗ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಲ್ಲಿ 4470 ಯುವಜನರು ತರಬೇತಿ ಪಡೆದು ಹಲವಾರು ಪ್ರತಿಷ್ಠಿತ ಕಂಪನಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9741721889, 9901125700, 7795075070 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours