ಮೂರು ರೈಲುಗಳ ನಡುವೆ ಅಪಘಾತ, 207 ಜನ ಸಾವು

 

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.

ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.

ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.

ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours