




ಭಾರತೀಯ ಚಿತ್ರರಂಗದ ಪಾಲಿಗೆ ಕಹಿ ಸುದ್ದಿ ಕೇಳಿಬಂದಿದೆ. ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.