ಕನ್ನಡದ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ಮತ್ತು ಪತಿ ಸುಮಂತ್ ಬಿಲ್ಲವ ನಾಲ್ಕು ವರ್ಷಗಳ ವೈವಾಹಿಕ ಜೀವನದ ಬಳಿಕ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸುದ್ದಿ ಅಭಿಮಾನಿಗಳಿಗೆ ಆಘಾತ ಮೂಡಿಸಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿ ಏಕಾಏಕಿ ದೂರವಾಗಲು ಮುಂದಾಗಿದ್ದು, ಕಾರಣ ನಿಗೂಢವಾಗಿದೆ. ಸದ್ಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ಬಳಿಕ ತೀರ್ಮಾನ ಹೊರಬೀಳಲಿದೆ.
ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.





