ಯುವ ಜನತೆ ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಅಳವಡಿಕೊಳ್ಳಿ -ಸಚಿವ ಡಿ.ಸುಧಾಕರ್

 

chitradurga: ಮಹರ್ಷಿ ವಾಲ್ಮೀಕಿ (Valmiki) ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಇಂದಿನ ಯುವ ಜನತೆ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕರೆ ನೀಡಿದರು.
ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಶ್ರಾಯದಲ್ಲಿ ಆಯೋಜಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ ಅವರು ಮಾತನಾಡಿದರು.

ವಾಲ್ಮೀಕಿ ಕುರಿತು ಹೆಚ್ಚು ಅಧ್ಯಯನ ಮಾಡಿ ಬೆಳಕು ಚೆಲ್ಲುವ ಅಗತ್ಯವಿದೆ. ಪ್ರತಿಯೊಬ್ಬರು ವಾಲ್ಮೀಕಿ ಬೋಧಿಸಿದ ಉಪದೇಶಗಳನ್ನು ಪರಿಪಾಲಿಸಿದರೆ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಜನರ ಸಂಖ್ಯೆ ಹೆಚ್ಚಿದೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ವಾಲ್ಮೀಕಿ ಸಮುದಾಯ ಹೆಚ್ಚು ಅಭಿವೃದ್ಧಿ ಹೊಂದಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕವಿಗಳಿಗೆ ಕವಿ ಮಹರ್ಷಿ ವಾಲ್ಮೀಕಿ, ಸಾಧರಣ ಬೇಡನಾಗಿದ್ದ ವಾಲ್ಮೀಕಿ ನಾರದ ಮುನಿಗಳ ಭೇಟಿಯಿಂದ ಕವಿಯಾಗಿ ಬದಲಾವಣೆ ಹೊಂದಿದರು ಎಂಬ ವಿಷಯ ಪುರಾಣಗಳಿಂದ ತಿಳಿದು ಬರುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಹಿಂದಿನ ಜೀವನವನ್ನು ಬದಲಾಯಿಸಿ, ಒಳ್ಳೆಯ ಆದರ್ಶಗಳನ್ನು ಮೈಗೂಡಿಸಿಕೊಂಡು ಮುಂದಿನ ಜೀವನ ನಡೆಸಬಹುದು ಎಂಬುದು ಇದರಿಂದ ತಿಳಿದು ಬರುತ್ತದೆ. ಚಿತ್ರದುರ್ಗ ನಗರದಲ್ಲಿ ವಾಲ್ಮೀಕಿ ಭವನ ನಿರ್ಮಾಣದ ಕಾರ್ಯ ಶೇ.80 ರಷ್ಟು ಪೂರ್ಣಗೊಂಡಿದೆ. ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಿ ಭವನದ ಉದ್ಘಾಟನೆ ನೆರವೇರಿಸಲಾಗುವುದು. ಚಳ್ಳಕೆರೆ ವೃತ್ತವನ್ನು ವಾಲ್ಮೀಕಿ ವೃತ್ತವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಪ್ರಸ್ತಾವಿಕವಾಗಿ ಮಾತನಾಡಿ, ಆದಿಕವಿ ಮಹರ್ಷಿ ವಾಲ್ಮೀಕಿ ಬರದ ರಾಮಾಯಣ ಭಾರತ ದೇಶದಲ್ಲಿ ಮಾತ್ರವಲ್ಲದೇ, ಇಂಡೋನೇμÁ್ಯ ಸೇರಿದಂತೆ ಆಗ್ನೇಯ ಏμÁ್ಯ ರಾಷ್ಟ್ರಗಳಲ್ಲಿ ಕೂಡ ಪ್ರಸಿದ್ಧಿ ಪಡೆದಿದೆ. ಮನಃಪರಿವರ್ತನೆ ಹೊಂದಿ ಮಾನವ ಜನಾಂಗದ ಕಲ್ಯಾಣಕ್ಕಾಗಿ ವಾಲ್ಮೀಕಿ ಸಂಸ್ಕøತದಲ್ಲಿ ರಾಮಾಯಣ ಮಹಾಕಾವ್ಯ ರಚಿಸಿದರು. ಭಾರತದ ಎಲ್ಲಾ ಭಾμÉಗಳಲ್ಲಿಯೂ ರಾಮಾಯಣವನ್ನು ಹಲವು ಕವಿಗಳು ಪುನರ್ ರಚಿಸಿದ್ದಾರೆ. ಜೀವನ ಪರಿವರ್ತನೆಗೆ ರಾಮಾಯಣ ಮಹಾಕಾವ್ಯ ಸ್ಪೂರ್ತಿಯಾಗಿದೆ. ಭಗವಂತ ವಿಷ್ಣು ರಾಮನ ಅವತಾರದಲ್ಲಿ ಸಂಪೂರ್ಣವಾಗಿ ಮಾನವ ಜೀವನವನ್ನು ನಡೆಸಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿದರು. ದುರಾಸೆ ಹೇಗೆ ಮಾನವನಿಗೆ ಸಂಕಷ್ಟ ತಂದು ಒಡ್ಡುತ್ತದೆ ಎಂಬುದನ್ನು ವಾಲ್ಮೀಕಿ ರಾಮಾಯಣ ಮಹಾಕಾವ್ಯದಲ್ಲಿ ಚಿತ್ರಿಸಿದ್ದಾರೆ ಎಂದು ಹೇಳಿದರು.

ಐವರಿಗೆ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕಾರ:

ಇತಿಹಾಸ ಸಂಶೋಧಕ ಡಾ.ಮಾಲತೇಶ್, ಚಿತ್ರಕಲಾವಿದ ಟಿ.ಎನ್.ವೀರೇಶ್, ಪತ್ರಕರ್ತ ಎಂ.ಎನ್.ಅಹೋಬಲಪತಿ, ಯುವ ಉದ್ಯಮಿ ಅರುಣಕುಮಾರ್ ಹಾಗೂ ನಿವೃತ್ತ ಇಂಜಿನಿಯರ್ ರುದ್ರಪ್ಪ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾಸಿ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕಾರ ನೀಡಲಾಯಿತು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತ್ಯುನ್ನತ ಸ್ಥಾನ ಪಡೆದ ಕುಮಾರಿ ಸಿ.ಬಿ.ಭವ್ಯಾ ಅವರಿಗೆ 1 ಲಕ್ಷ ಪ್ರೋತ್ಸಾಹದ ಚಕ್ ನೀಡಿ ಸನ್ಮಾನಿಸಲಾಯಿತು. ಹಿರಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಎಸ್. ಮಾರುತಿ ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು.
ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರು ಹೆಚ್.ಜೆ.ಕುಮಾರಸ್ವಾಮಿ,  ಉಪವಿಭಾಗಧಿಕಾರಿ ಆರ್.ಕಾರ್ತಿಕ್, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಿ. ಕಾಂತರಾಜ್,  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗದದ ಜಿಲ್ಲಾ ವ್ಯವಸ್ಥಾಪಕಿ ಟಿ.ಎಸ್.ಮಂಜುಳ, ನಗರ ಸಭೆ ಆಯುಕ್ತೆ ರೇಣುಕಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಅದ್ದೂರಿ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ  ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಾಲ್ಮೀಕಿ ಭಾವಚಿತ್ರ ಹಾಗೂ ಪುತ್ಥಳಿ ಮೆರವಣಿಗೆಗೆ ಶನಿವಾರ ಕೋಟೆ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹಾಗೂ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ವಾಲ್ಮೀಕಿ ಪುತ್ಥಳಿಗೆ ಪಷ್ಪರ್ಚನೆ  ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಕೋಟೆ ಮುಂಭಾಗದಿಂದ ಆರಂಭವಾದ ಮೆರವಣಿಗೆ, ಏಕನಾಥೇಶ್ವರ ಹಾಗೂ ಹುಚ್ಚೆಂಗಿಯಲ್ಲಮ್ಮ ದೇವಸ್ಥಾನ ಮುಂಭಾಗದಿಂದ, ಆನೆ ಬಾಗಿಲು, ಗಾಂಧಿ ವೃತ್ತ, ಎಸ್.ಬಿ.ಐ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಮದಕರಿ ನಾಯಕ ವೃತ್ತದವರೆಗೆ ಸಾಗಿತು. ಖಾಸ ಬೇಡರ ಪಡೆ, ಕಹಳೆ ವಾದನ, ಡೋಲು, ತಪ್ಪಡೆ, ಕರಡಿ ಮಜಲು, ಕೀಲು ಕುದುರೆ, ಗೊಂಬೆ ಕುಣಿತ, ಪಟ ಕುಣಿತ ಮೆರವಣಿಗೆಗೆ ಸಾಂಸ್ಕøತಿಕ ರಂಗನ್ನು ತುಂಬಿದವು.
ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಿ. ಕಾಂತರಾಜ್, ಮದಕರಿ ನಾಯಕ ವಿದ್ಯಾಸಂಸ್ಥೆಯ ಸಂದೀಪ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗದದ ಜಿಲ್ಲಾ ವ್ಯವಸ್ಥಾಪಕಿ ಟಿ.ಎಸ್.ಮಂಜುಳ, ನಗರ ಸಭೆ ಆಯುಕ್ತೆ ರೇಣುಕಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಸಿರ್ಂಗ್,ಬಿಎಡ್,ಪದವಿ,ಪಿಯು ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours