ಗುರುವಾಯನಕೆರೆ: ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್.ಎಸ್. ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪರೀಕ್ಷೆಯಲ್ಲಿ 200ಕ್ಕೆ 200 ಅಂಕಗಳನ್ನು ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಕಾಲೇಜು ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಯ ಈ ಅಸಾಧಾರಣ ಸಾಧನೆಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.





