ವೇಣೂರು: ಕೃಷಿ ಕ್ಷೇತ್ರದಲ್ಲಿ ಮಾಡಿರುವ ಅಭೂತಪೂರ್ವ ಸಾಧನೆಗಾಗಿ ಬಜಿರೆ ಗ್ರಾಮದ ಹಟ್ಟಾಜೆಗುತ್ತು ವಿ. ಪ್ರಭಾಕರ ಹೆಗ್ಡೆ ಅವರು ಕೃಷಿ ಸಿಂಧೂರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಮಡಂತ್ಯಾರ್ ನಲ್ಲಿ ಜರಗಿದ 72ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ೨೦೨೫ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ನಿವೃತ್ತ ಶಿಕ್ಷಕರಾಗಿರುವ ಇವರು ರಾಷ್ಟ್ರೀಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಗಳಿಸಿಕೊಂಡಿದ್ದರು. ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಸೇವೆ ನೀಡುತ್ತಿದ್ದಾರೆ.





