ಎಐಸಿಸಿ ನಾಯಕರು ಕೊನೆಗೂ ಕೇರಳ ನೂತನ ಸಿಎಂ ಹೆಸರನ್ನು ಘೋಷಣೆ ಮಾಡಿದ್ದಾರೆ. ದೇವರನಾಡಿನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದು, 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಕೇರಳದಲ್ಲಿ ಯುಡಿಎಫ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ನಾನಾ ಲೆಕ್ಕಾಚಾರಗಳ ಬಳಿಕ ವರಿಷ್ಠರು ಅಂತಿಮವಾಗಿ ಇಂದು (ಮೇ 14) ಕೇರಳ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಿದ್ದಾರೆ.