ನಾರಾವಿ: ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದ್ದ ೩೦ ಕ್ಕೂ ಹೆಚ್ಚು ಆದಿವಾಸಿ ಮಲೆಕುಡಿಯ ಕುಟುಂಬಗಳನ್ನು ಬಲವಂತವಾಗಿ ಒಕ್ಕಲೆಬ್ಬಿಸಿರುವುದಾಗಿ ಆರೋಪಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹಾಗು ನಾರಾವಿ ಭೂ ಸಂತ್ರಸ್ತರ ಸಮಿತಿಯ ನೇತೃತ್ವದಲ್ಲಿ ನಾರಾವಿ ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು.


ಅರಣ್ಯ ಇಲಾಖೆ ಹಾಗೂ ಗ್ರಾ.ಪಂ.ನ ನಡೆಯನ್ನು ಖಂಡಿಸಿದ ಪ್ರತಿಭಟನಾಕಾರರು ಸಂತ್ರಸ್ತ ಮಲೆಕುಡಿಯ ಕುಟುಂಬಗಳಿಗೆ ನ್ಯಾಯ ಒದಗಿಸದಿದ್ದಲ್ಲಿ ಆಗಸ್ಟ್ ೧೨ ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುವ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಎಂ. ಭಟ್ ಸೇರಿದಂತೆ ಹಲವು ಮಂದಿ ಇದ್ದರು.



