ಮೈತ್ರಿಗೆ ಮುಖಭಂಗ:MLC ಚುನಾವಣೆಯಲ್ಲಿ ಕಾಂಗ್ರೆಸ್ ಪುಟ್ಟಣ್ಣಗೆ ಗೆಲುವು

 

ಬೆಂಗಳೂರು (ಫೆ.20): ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ಮತನಾದ ನಡೆದಿತ್ತು. ಈ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲುಂಟಾಗಿದ್ದು, ಕಾಂಗ್ರೆಸ್‌ (congress)  ಅಭ್ಯರ್ಥಿ ಪುಟ್ಟಣ್ಣ  (Puttanna)  ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1,600 ಮತಗಳಿಂದ ಜಯಗಳಿಸಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರಿ ಕಾಲಾ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯದಲ್ಲಿ ಮೂರು ಸುತ್ತುಗಳ ಮತ ಎಣಿಕೆ ನಡೆದಿತ್ತು. ಈ ವೇಳೆ ಕೊನೆಯ ಎರಡು ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಪುಟ್ಟಣ್ಣ ಗೆಲುವು ಖಚಿತವಾಗಿದೆ. ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಾಕ್ಷಣ ಪುಟ್ಟಣ್ಣ ಬೆಂಬಲಿಗರಿಂದ ಸಂಭ್ರಮಾಚರಣೆ ಮನೆ ಮಾಡಿದೆ. ಕಾಂಗ್ರೆಸ್ ಕಾರ್ಯಕರ್ತರು ಡೋಲು ಬಡಿದು ಡ್ಯಾನ್ಸ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭೂಸೇನಾ ನೇಮಕಾತಿಗೆ ಅರ್ಜಿ ಆಹ್ವಾನ

[t4b-ticker]

You May Also Like

More From Author

+ There are no comments

Add yours