ಕಾವೇರಿ ಹೋರಟಕ್ಕೆ ಕೋಟೆ ನಾಡಲ್ಲಿ ಮಿತ್ರ ಪ್ರತಿಕ್ರಿಯೆ

 

ಚಿತ್ರದುರ್ಗ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡು ವಿಜಯಸೇನೆ, ವನ್ಯಜೀವಿ ಸಂರಕ್ಷಣಾ ವೇದಿಕೆ, ಎಪಿಎಂಸಿ ಹಮಾಲರ ಸಂಘ, ರಾಜ್ಯ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘಟನೆ ಸೇರಿದಂತೆ‌ ವಿವಿಧ ಸಂಘಟನೆಗಳು ಬೆಳಗ್ಗೆ 6 ಗಂಟೆಯಿಂದ ರಸ್ತೆಗಿಳಿದು ಪ್ರತಿಭಟನೆಗೆ ಇಳಿದು, ಅಂಗಡಿ ಮುಂಗಟ್ಟುಗಳ ಬಾಗಿಲು ತೆರೆಯದಂತೆ ಮಾಲೀಕರಲ್ಲಿ ಮನವಿ ಮಾಡುತ್ತ, ರಸ್ತೆಗಳಲ್ಲಿ ವಾಹನಗಳನ್ನು ಚಲಾಯಿಸುವವರಿಗೆ ಒಂದು ಮನೆಯಲ್ಲೇ ಇದ್ದು ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ಕೈ‌ ಮುಗಿದು ಮನವಿ ಮಾಡಿದರು. ಇದರಿಂದ ಬಿಡಿ ರಸ್ತೆ, ಮೇದೆಹಳ್ಳಿ ರಸ್ತೆ, ಹೊಳಲ್ಕೆರೆ ರಸ್ತೆ, ಸೇರಿದಂತೆ ಇತರೆ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳನ್ನು ತೆರೆಯಲಿಲ್ಲ. ಬೆಳಗ್ಗೆ ಹಾಲು, ಸೊಪ್ಪು, ತರಕಾರಿ, ವ್ಯಾಪರ ಬಿಟ್ಟರೆ ಉಳಿದಂತೆ ಯಾವುದೇ ವ್ಯಾಪಾರ ವಹಿವಾಟು ನಡೆಯಲಿಲ್ಲ.
ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಎಂದಿನಂತೆ ಬಸ್ ನಿಲ್ದಾಣಕ್ಕೆ ಬಂದು ನಿಂತಿದ್ದರೆ ಇತರೆ ಊರುಗಳಿಗೆ ಓಡಾಡುವ ಪ್ರಯಾಣಿಕರು ಇಲ್ಲದೆ ನಿಲ್ದಾಣದಲ್ಲಿ ಬಿಕೋ ಎನ್ನುತ್ತಿದ್ದವು. ಖಾಸಗಿ ಬಸ್ಸುಗಳ ಮಾಲೀಕರು ಬಸ್ಸುಗಳನ್ನು ರಸ್ತೆಗೆ ಇಳಿಸದೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.
ಶಾಲಾ-ಕಾಲೇಜುಗಳು ಜಿಲ್ಲಾಡಳಿತ ರಜೆ ಘೋಷಣೆ ಮಾಡದೆ ಇದ್ದ ಕಾರಣ ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳು ದಿನನಿತ್ಯದಂತೆ ನಡೆದಿದ್ದು, ಕೆಲ ಖಾಸಗಿ ಶಾಲಾ-ಕಾಲೇಜುಗಳು ರಜೆ ಘೋಷಣೆ ಮಾಡಿದ್ದರು. ಇದರಂದ ಶಾಲಾ ಕಾಲೇಜು ವಾಹನಗಳು ಇಲ್ಲದೆ ಮಕ್ಕಳು ಓಡಾಟವು ಇರಲಿಲ್ಲ.
ಬಂದ್ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಸೆಕ್ಷನ್ 144ಅಡಿ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದರು. ಬೆಳಗ್ಗೆ 6 ಗಂಟೆಯಿಂದಲೇ ಜಾರಿ ಇದ್ದ ನಿಷೇದಾಜ್ಞೆ ಸಂಜೆ 6ರವರೆಗೆ ಜಾರಿ ಇರಲಿದೆ.
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರೈತಪರ ಸಂಘಟನೆಗಳು ಚಿತ್ರದುರ್ಗದ ಗಾಂಧಿವೃತ್ತದಲ್ಲಿ ಧರಣಿ ನಡೆಸಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಸ್ಟಾಲಿನ್ ವಿರುದ್ಧ ಪ್ರತಿಭಟನಾಕಾರರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಕರುನಾಡ ವಿಜಯಸೇನೆಯ ಕಾರ್ಯಕರ್ತರು ನಿಷೇದಾಜ್ಞೆ ಇದ್ದರು ಕೂಡ ಪ್ರವಾಸಿ ಮಂದಿರ ಬಳಿ ಟೈರಿಗೆ ಬೆಂಕಿಇಟ್ಟು ಆಕ್ರೋಶ ಹೊರಹಾಕಿದರಲ್ಲದೆ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಚಿತ್ರದುರ್ಗ ನಗರ ಠಾಣೆ ಪೊಲೀಸರು ನೀರು ಸುರಿದು ಬೆಂಕಿ ನಂದಿಸಿದರು.
ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಕರುನಾಡ ವಿಜಯಸೇನೆ ಜಿಲ್ಲಾದ್ಯಕ್ಷ ಕೆ.ಟಿ.ಶಿವಕುಮಾರ್ ನೇತೃತ್ವದಲ್ಲಿ ಧರಣಿ ಕೈಗೊಂಡ ಕಾರ್ಯಕರ್ತರು ರಕ್ತ ಚೆಲ್ಲುತ್ತೇವೆ ಕಾವೇರಿ ನೀರು ಬಿಡುವುದಿಲ್ಲ ಎಂದು ರಕ್ತದಲ್ಲಿ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ ಭಾವಚಿತ್ರದ ಮೇಲೆ ರಕ್ತ ಚೆಲ್ಲಿ ಕಿಡಿಕಾರಿದರು. ಇದರಂದ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಧರಣಿ ನಡೆಸಲಾಯಿತು. ಧರಣಿಯ ನಡುವೆ ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಸಂಸದರ ಅಣಕು ಶವಯಾತ್ರೆ ಮಾಡಲಾಯಿತು.
ಗಾಂಧಿ ವೃತ್ತದಿಂದ ಹೊರಟ ಅಣಕು ಶವಯಾತ್ರೆಯನ್ನು ಪ್ರವಾಸಿ ಮಂದಿರ ಬಳಿಯೇ ಪೊಲೀಸರು ತಡೆದರು.
ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾದ್ಯಕ್ಷ ಮಹಾಂತೇಶ, ಕರುನಾಡ ವಿಜಯಸೇನೆ ಜಿಲ್ಲಾದ್ಯಕ್ಷ ಕೆ.ಟಿ.ಶಿವಕುಮಾರ್ ಸೇರಿದಂತೆ ಗಾಂಧಿವೃತ್ತದ ಬಳಿ 20ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
[t4b-ticker]

You May Also Like

More From Author

+ There are no comments

Add yours