ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಹಾಗೂ ಆಯಕಟ್ಟಿನ ಸಂಪರ್ಕ ರಸ್ತೆಯಾಗಿರುವ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ಸಮಗ್ರ ಅಭಿವೃದ್ಧಿಗೆ ತಕ್ಷಣವೇ ಅಗತ್ಯ ಅನುದಾನ ಮಂಜೂರು ಮಾಡಿ ಬಿಡುಗಡೆಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಂಚಾರಕ್ಕೆ ಅತ್ಯಂತ ದಟ್ಟಣೆಯ ಹಾಗೂ ಪ್ರಮುಖ ಮಾರ್ಗವಾಗಿರುವ ಈ ರಸ್ತೆಯು ಪ್ರಸ್ತುತ ಶೋಚನೀಯ ಸ್ಥಿತಿಯಲ್ಲಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಭಾಗದ ಜನರ ಸುಗಮ ಸಂಚಾರ, ರಸ್ತೆ ಸುರಕ್ಷತೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

