ಮಂಗಳೂರು, ಏ. 9: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಆನ್ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್ಲೈನ್ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು…ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.





