ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನ

ವಿಜಯಪುರ,ಫೆ.26-ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನವಾಗಿರುವ ಘಟನೆ ಚಡಚಣ ಪಟ್ಟಣದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಗುಡಿಸಲಿನಲ್ಲಿ ಮಲಗಿದ ವೇಳೆ ಚಿಮಣಿಯಿಂದ ಬೆಂಕಿ ಅವಘಡ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಬೆಂಕಿಯಿಂದ ಗುಡಿಸಲು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಡಚಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours