ನ.15 ಮತ್ತು 16ರಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.10:
ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಇದೇ ನವೆಂಬರ್ 15 ಮತ್ತು 16ರಂದು ನಡೆಯಲಿದ್ದು, ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನವೆಂಬರ್ 15ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ರಾಜಣ್ಣ ಭಾಗವಹಿಸಲಿದ್ದಾರೆ. ನವೆಂಬರ್ 16ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ದಾವಣಗೆರೆ ಪೂರ್ವ ವಲಯ ಉಪ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜನ್, ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿವಾಕರ್ ಎಂ.ಎಸ್ ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಕೆ.ಪರಶುರಾಮ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours