ವೇಣೂರು: ನಿಟ್ಟಡೆ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ನಡೆಯಿತು.
ಕುಕ್ಕೇಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು ಉದ್ಘಾಟಿಸಿದರು. ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸಂಚಾಲಕ ಅಶ್ವಿತ್ ಕುಲಾಲ್ ಅವರು ಸಮಗ್ರ ಸಂಯೋಜನೆ ಮಾಡಿದರು.
ಅದಕ್ಕೂ ಮೊದಲು ವಿದ್ಯಾರ್ಥಿಗಳ ಮಾರ್ಚ್ ಪಾಸ್ಟ್ ನಡೆಯಿತು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಗ್ರಾಮ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಉಪಸ್ಥಿತರಿದ್ದರು. ಶೈಕ್ಷಣಿಕ ಸಲಹೆಗಾರ ಮನೋಜ್ ಎಸ್. ವಂದಿಸಿದರು.





