ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ 14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದು, ಕೂಡಲೇ ಸ್ಥಳೀಯರು ಹುಡುಕಾಟ ನಡೆಸಿದ್ದರು. ಇದೀಗ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆಗಳು ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿವೆ.





