ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿರುವ ಉತ್ತರಗಳು ಮತ್ತು ಬೇಡಿಕೆಗಳು

 

ಬೆಂಗಳೂರು: ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಮುಂದೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವೇತನ, ಮನೆ ಬಾಡಿಗೆ, ಪಿಂಚಣಿ, ಭತ್ಯೆ ಪರಿಷ್ಕರಣೆ ಕುರಿತು ಹಲವಾರು ಬೇಡಿಕೆಗಳನ್ನು ಇಟ್ಟಿದೆ. ಅವುಗಳಲ್ಲಿ ಪ್ರಮುಖ ಬೇಡಿಕೆಗಳ ಪಟ್ಟಿ ಇಲ್ಲಿದೆ.ರಾಜ್ಯ 7ನೇ ವೇತನ ಆಯೋಗದ ಪ್ರಶ್ನಾವಳಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿರುವ ಉತ್ತರಗಳು ಮತ್ತು ಬೇಡಿಕೆಗಳು ಇಲ್ಲಿವೆ.

1. ಹೊಸ ವೇತನ ಶ್ರೇಣಿಗಳ ರಚನೆಗೆ ಅಳವಡಿಸಿಕೊಂಡಿರುವ ಮಾನಂದಂಡಗಳು: ಸಮಾನ ಕೆಲಸಕ್ಕೆ ಸಮಾನ ವೇತನ, ವಿದ್ಯಾರ್ಹತೆ, ಜವಾಬ್ದಾರಿಯ ಗುಣಮಟ್ಟ, ಕಾರ್ಯಕ್ಷಮತೆ, ಕಾರ್ಯಕ್ಷೇತ್ರದ ವ್ಯಾಪ್ತಿ, ಜೊತೆಗೆ ನೆರೆ ರಾಜ್ಯ ಮತ್ತು ಕೇಂದ್ರ ವೇತನ ಮತ್ತು ಭತ್ಯೆಗಳ ಹೋಲಿಕೆ2. ಕಚೇರಿ ವೇಳೆಯನ್ನು ಹೆಚ್ಚಿಸಿ, ವಾರದ ಕರ್ತವ್ಯ ದಿನಗಳನ್ನು ಕಡಿಮೆ ಮಾಡಿ: ಕೇಂದ್ರ ಸರ್ಕಾರಿ ಬೆಳಗ್ಗೆ 10.00 ಕ್ಕೆ ಬದಲಾಗಿ ಬೆಳಗ್ಗೆ 9.30 ರಿಂದ ಹಾಗೂ ಸಂಜೆ 5.30ಕ್ಕೆ ಬದಲಾಗಿ ಸಂಜೆ 6.00 ರವರೆಗೆ ಬದಲಾಯಿಸುವುದು. ತಿಂಗಳ ಮೊದಲ ಮತ್ತು ಮೂರನೆ ಶನಿವಾರ ಸಾರ್ವತ್ರಿಕ ರಜೆ ನೀಡುವುದು.7th Pay Commission; ವರದಿ ಅನುಷ್ಠಾನ, ಸರ್ಕಾರಕ್ಕೆ ಹೊರೆ ಎಷ್ಟು?3. ಅನುಕೂಲವಾಗುವ ಕೇಂದ್ರ ಮತ್ತು ಕೇರಳ ರಾಜ್ಯ ನೌಕರರ ವೇತನ-ಭತ್ಯೆಗಳನ್ನು ಪರಿಗಣಿಸುವುದು.4. 6ನೇ ವೇತನ ಆಯೋಗದಲ್ಲಿ ಪ್ರಸ್ತುತ ಮೂಲ ವೇತನಕ್ಕೆ ಹಾಲಿ ಇರುವ ಶೇ.31ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ. 40% ರಷ್ಟು ಫಿಟ್ ಮೆಂಟ್ ಸೌಲಭ್ಯವನ್ನು ದಿನಾಂಕ: 01.07.2022ರಿಂದ ಜಾರಿಗೆ ತರುವುದು. 5. ಹಾಲಿ ಇರುವ 25 ಮಾಸ್ಟರ್ ವೇತನ ಶ್ರೇಣಿ ಹಾಗೂ 92 ವೇತನ ಹಂತಗಳನ್ನು ಮುಂದುವರೆಸುವುದು.6. ಹೊಸ ವೇತನ ಶ್ರೇಣಿಗಳನ್ನು 2022ನೇ ಸಾಲಿನ ಬೆಲೆ ಸೂಚ್ಯಾಂಕದ 12 ತಿಂಗಳ

ಸರಾಸರಿಯ ಆಧಾರದ ಮೇಲೆ ವೇತನ ಶ್ರೇಣಿಗಳ ದರಗಳನ್ನು ನಿಗದಿಪಡಿಸುವುದು.7. ಕನಿಷ್ಟ 40% ಫಿಟ್‌ಮೆಂಟ್ ನೊಂದಿಗೆ ಹಾಗೂ ಜೀವನ ನಿರ್ವಹಣೆಯನ್ನಾಧರಿಸಿ, ಗ್ರೂಪ್ ‘ಡಿ’ ನೌಕರನ ಕನಿಷ್ಠ ಮೂಲ ವೇತನ ರೂ. 31,000 ಕ್ಕೆ ನಿಗದಿಗೊಳಿಸುವುದು.8. ಪರಿಷ್ಕರಿಸಲಿರುವ ವೇತನ ಶ್ರೇಣಿಗಳಲ್ಲಿನ ಕನಿಷ್ಠ ಹಾಗೂ ಗರಿಷ್ಠ ವೇತನದ ನಡುವಿನ ಈಗಿರುವ ಅನುಪಾತ 1:5,20 ರ ಬದಲಾಗಿ 1:8.86 ಕ್ಕೆ ನಿಗದಿಪಡಿಸಿ ಶಿಫಾರಸ್ಸು ಮಾಡುವುದು.9 . ಒಬ್ಬ ಸರ್ಕಾರಿ ನೌಕರನಿಗೆ ಸೇವಾವಧಿಯಲ್ಲಿ ಕನಿಷ್ಠ 3-4 ಮುಂಬಡ್ತಿ ಅವಕಾಶಗಳು ಲಭ್ಯವಾಗುವಂತೆ ಶಿಫಾರಸ್ಸು ಮಾಡುವುದು. ವಾರ್ಷಿಕ ವೇತನ ಬಡ್ತಿಯ ದರವನ್ನು ಕೇರಳ ರಾಜ್ಯದ ಮಾದರಿಯಲ್ಲಿ ಮೂಲ ವೇತನಕ್ಕೆ ಶೇ.3.04% ರಷ್ಟು ನಿಗಧಿ ಪಡಿಸುವುದು. ಸ್ಥಗಿತ ವೇತನ ಬಡ್ತಿಯನ್ನು ಹಾಲಿ ಇರುವ 8 ರಿಂದ 12 ಕ್ಕೆ ಹೆಚ್ಚಿಸುವುದು.10. ಸಚಿವಾಲಯ-ಸಚಿವಾಲಯೇತರ ಸಮಾನ ಹುದ್ದೆಗಳ ವೇತನವನ್ನು ಸಮಾನಗೊಳಿಸಲು ಶಿಫಾರಸ್ಸು ಮಾಡುವುದು.11 . ಪ್ರತಿ 6 ತಿಂಗಳಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು ಪರಿಷ್ಕೃತ ವೇತನದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೆ ವಿಳಂಬವಿಲ್ಲದೆ ನೀಡುವುದು.13. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಲಭ್ಯವಿರುವ 2021ರ ಜನಸಂಖ್ಯೆಯ

ಮಾಹಿತಿಯನ್ನಾಧರಿಸಿ ನಗರ ಹಾಗೂ ಪಟ್ಟಣ ಪ್ರದೇಶಗಳನ್ನು ಪುನರ್‌ವರ್ಗೀಕರಿಸುವುದು ಹಾಗೂ ಬಿ.ಬಿ.ಎಂ.ಪಿ ವ್ಯಾಪ್ತಿಯನ್ನು ಬೆಂಗಳೂರು ನಗರ ಜಿಲ್ಲೆ ಗಡಿ ವ್ಯಾಪ್ತಿಗೆ ವಿಸ್ತರಿಸುವುದು. ಪ್ರಸ್ತುತ ಜೀವನ ನಿರ್ವಹಣೆ ಆಧಾರದ ಮೇಲೆ ಈ ಕೆಳಕಂಡ ದರದಲ್ಲಿ ಮನೆ ಬಾಡಿಗೆ ಭತ್ಯೆ ನೀಡುವುದು. ಕೇಂದ್ರ ಮಾದರಿಯಲ್ಲಿ ತುಟ್ಟಿಭತ್ಯೆಯು ಶೇ.25% ಮತ್ತು ಶೇ.50%ರ ಹಂತವನ್ನು ತಲುಪಿದಾಗ ಮನೆ ಬಾಡಿಗೆ ಭತ್ಯೆಗಳನ್ನು ಸ್ವಯಂಚಾಲಿತವಾಗಿ ಶೇ. 3% ರಷ್ಟು ಹೆಚ್ಚಿಸುವುದು.14. ನಮ್ಮ ರಾಜ್ಯದಲ್ಲಿ ಸೇವಾವಧಿಯಲ್ಲಿ 2 ಬಾರಿ ಇದ್ದು, ಕೇಂದ್ರ ಸರ್ಕಾರದಲ್ಲಿ (LTC) ಸೌಲಭ್ಯವುಪ್ರತಿ 4 ವರ್ಷಕ್ಕೊಮ್ಮೆ ನೀಡುತ್ತಿದ್ದು, ಆದರಂತೆ ನೀಡುವುದು. ಹಾಗೂ ದಿನಭತ್ಯೆಯನ್ನು ಸಹ ನೀಡುವುದು.15. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಲಭ್ಯವಾಗಬೇಕು.16. ಮಹಿಳಾ ಉದ್ಯೋಗಿಗಳ ವಿಶೇಷ ಸಮಸ್ಯೆಗಳು: ಮಕ್ಕಳಿಗೆ ದಿನಕ್ಕೆ 2 ಬಾರಿ ಸ್ತನ್ಯಪಾನಕ್ಕಾಗಿ ಅವಕಾಶ, ಶುಚಿತ್ವವಾದ ಪ್ರತ್ಯೇಕ ಶೌಚಾಲಯ, ಬಾಡಿಗೆ ತಾಯ್ತನದ ಮಹಿಳಾ ನೌಕರರಿಗೆ ಶಿಶುಪಾಲನಾ,ಹೆರಿಗೆ ರಜೆ ಮಂಜೂರು ಮಾಡುವುದು.17. ಬೆಟ್ಟಗುಡ್ಡಗಳಿರುವ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ನೌಕರರಿಗೆ ಗಿರಿಭತ್ಯೆಯನ್ನು ಮಂಜೂರು ಮಾಡುವುದು. ನಿಗದಿತ ಪ್ರಯಾಣ ಭತ್ಯೆ, ಅನ್ಯಸೇವೆ ಭತ್ಯೆ ಹಾಗೂ ಪ್ರಭಾರ ಭತ್ಯೆ ದರವನ್ನು ಹೆಚ್ಚಿಸುವುದು.18. ಕೇಂದ್ರ ಕೇಂದ್ರ ಮಾದರಿಯಂತೆ ವರ್ಗಾವಣೆಗೊಂಡ/ವಯೋನಿವೃತ್ತಿ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಕೊನೆ ಮಾಹೆಯ ಮೂಲವೇತನದ ಶೇ. 80% ರಷ್ಟು ವರ್ಗಾವಣೆ ಅನುದಾನ ಮತ್ತು ಸಾಮಾನು ಸರಂಜಾಮು ಸಾಗಣೆ ಭತ್ಯೆಯನ್ನು ನೀಡುವಂತೆ ಶಿಫಾರಸ್ಸು ಮಾಡುವುದು.19. ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ: ಇಂಧನ ಬೆಲೆ, ಪ್ರಯಾಣ-ಸಾರಿಗೆ ವೆಚ್ಚ. ವಸತಿ ಹಾಗೂ ಊಟ-ಉಪಹಾರಗಳು ದುಬಾರಿಯಾಗಿರುವುದರಿಂದ ಪ್ರಯಾಣ ಭತ್ಯೆ, ದಿನಭತ್ಯೆ ವಿಮಾನ,ರೈಲು ಮತ್ತು ಬಸ್ಸಿನ ದರಗಳನ್ನು ಹೆಚ್ಚಿಸುವುದು.20. ನಿವೃತ್ತಿ ನಂತರ 300 ಗಳಿಕೆ ರಜಾ ದಿನಗಳ ನಗದೀಕರಣ ಸೌಲಭ್ಯದ ಗರಿಷ್ಠ ಮಿತಿಯನ್ನು 330ಕ್ಕೆ ಹೆಚ್ಚಿಸುವುದು.21. ರೂ. 25,000-00 ಗಳ ಬಡ್ಡಿರಹಿತ ಹಬ್ಬದ ಮುಂಗಡವನ್ನು ಯಾವುದೇ ಷರತ್ತುಗಳನ್ನು ವಿಧಿಸದೆ ಎಲ್ಲಾ ನೌಕರರಿಗೂ ಮಂಜೂರು ಮಾಡುವುದು. ಕನಿಷ್ಠ ವೇತನದ ಮಿತಿಯನ್ನು (Home take Salary) ಶೇ. 60% ರಿಂದ ಶೇ. 40%ಕ್ಕೆ ನಿಗದಿಗೊಳಿಸುವುದು.22. ಸಾಮೂಹಿಕ ವಿಮಾ ಯೋಜನೆ: ಒಂದು ಯುನಿಟ್ ದರ ರೂ. 120/-ರಿಂದ 1200/ ಕ್ಕೆ ಹೆಚ್ಚಿಸುವ ಮೂಲಕ ವಿಮಾ ಮೊತ್ತವನ್ನು ಹೆಚ್ಚಿಸುವುದು. ಉಳಿತಾಯ ನಿಧಿ ಮತ್ತು ವಿಮಾ ನಿಧಿ ಸದ್ಯದ 70:30ರ ಅನುಪಾತವನ್ನು 75:25 ಕ್ಕೆ ಮಾರ್ಪಡಿಸುವುದು. ಉಳಿತಾಯ

ಹೆಚ್ಚಿಸುವುದು.23. ಸ್ವಇಚ್ಛಾ ನಿವೃತ್ತಿ: ಸ್ವಇಚ್ಛಾ ನಿವೃತ್ತಿಗೆ 15 ವರ್ಷ ಕನಿಷ್ಠ ಸೇವೆ ಅಥವಾ 50 ವರ್ಷ ವಯಸ್ಸು ಎನ್ನುವ ಬದಲಾಗಿ 12 ವರ್ಷಗಳ ಸೇವಾವಧಿ ಅಥವಾ 45 ವರ್ಷಗಳ ವಯಸ್ಸಾಗಿರಬೇಕೆಂದು ತಿದ್ದುಪಡಿ ಮಾಡುವುದು.24. ಪಿಂಚಣಿ ಪ್ರಯೋಜನಗಳು: ನಿವೃತ್ತಿ ಪಿಂಚಣಿಗಾಗಿ ಕನಿಷ್ಠ ಸೇವೆ-30 ರಿಂದ 25 ಕ್ಕೆ ಇಳಿಸುವುದು. ವಿಶ್ರಾಂತಿ ಪಿಂಚಣಿ- ಕನಿಷ್ಠ ಕುಟುಂಬ ರೂ.16,500ಕ್ಕೆ ಮತ್ತು ಗರಿಷ್ಠ 3.1.50,000ಕ್ಕೆ ಏರಿಕೆ. ಮರಣ-ನಿವೃತ್ತಿಉಪದಾನ-ಗರಿಷ್ಠ ಮಿತಿಯನ್ನು 20 ಲಕ್ಷಗಳಿಂದ 25 ಲಕ್ಷಗಳಿಗೆ ಹೆಚ್ಚಿಸುವುದು.25. ಎಲೆಕ್ಟ್ರಾನಿಕ್ ಸರ್ವೀಸ್ ರಿಜಿಸ್ಟರ್ ವ್ಯವಸ್ಥೆಯನ್ನು ಶೀಘ್ರ ಜಾರಿಗೊಳಿಸಿ ನಿವೃತ್ತಿ ಹೊಂದುವ ನೌಕರರಿಗೆ ಪಿಂಚಣಿ ಸವಲತ್ತುಗಳನ್ನು ಹೆಚ್.ಆರ್.ಎಂ.ಎಸ್. ತಂತ್ರಾಂಶದ ಮೂಲಕವೇ ಪಡೆಯುವ ಅವಕಾಶ ಕಲ್ಪಿಸುವುದು.26. ನಿವೃತ್ತ ಪಿಂಚಣಿದಾರರಿಗೆ ತುಟ್ಟಿಭತ್ಯೆ: ಸೇವಾನಿರತ ನೌಕರರಿಗೆ ನೀಡುವ ವಾರ್ಷಿಕ ವೇತನ ಬಡ್ತಿ ದರದಲ್ಲಿಯೇ ನಿವೃತ್ತ ನೌಕರರಿಗೂ ಸಹ ಸಮನಾಂತರ ತುಟ್ಟಿಭತ್ಯೆಯನ್ನು ನೀಡಲು ಶಿಫಾರಸ್ಸು ಮಾಡುವುದು.27. 80 ವರ್ಷ ಮೇಲ್ಪಟ್ಟವರಿಗೆ ಪಿಂಚಣಿದಾರರಿಗೆ ವಯೋಮಾನವನ್ನಾಧರಿಸಿ ಹೆಚ್ಚುವರಿ ಪಿಂಚಣಿಯನ್ನು ಮಂಜೂರು ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು.28. ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು.29.

2,50,363 ಖಾಲಿ ಹುದ್ದೆಗಳ ಭರ್ತಿ ಮಾಡಿ ನೌಕರರನ್ನು ಒತ್ತಡದಿಂದ ಮುಕ್ತಿಗೊಳಿಸಿ ಸಮುದಾಯಕ್ಕೆ ಗುಣಮಟ್ಟದ ನಾಗರೀಕ ಸೇವೆಗಳನ್ನು ನೀಡಲು ಶಿಫಾರಸ್ಸು ಮಾಡುವುದು. ಶವಸಂಸ್ಕಾರ ಭತ್ಯೆ ರೂ.15000-00 ಗಳನ್ನು ರೂ. 30,000-00 ಗಳಿಗೆ ಹೆಚ್ಚಳ ಮಾಡುವುದು. ಕೇಂದ್ರ ಮಾದರಿಯಲ್ಲಿ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಶೈಕ್ಷಣಿಕ ಭತ್ಯೆ ಯೋಜನೆ ಜಾರಿಗೆ ತರುವುದು.

[t4b-ticker]

You May Also Like

More From Author

+ There are no comments

Add yours