ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗಾಗಿ ಅರ್ಜಿ

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 14:
ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ “ಜನರಲ್ ಕೆ.ಎಸ್.ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಶುಲ್ಕ ರಹಿತ ಅರ್ಜಿಗಳನ್ನು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours