ಎರಡು ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ

 

 

 

 

chithradurga:ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ದಿಗಾಗಿ 2023-24ನೇ ಸಾಲಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ  (KVLDCL)  ಯೋಜನೆಗಳಲ್ಲಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು, ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು, ಒಂದು ಕಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ, ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು, ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ. ಸಂಪತ್‍ಕುಮಾರ್  ತಿಳಿಸಿದ್ದಾರೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯ ಅರ್ಜಿ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.11:
2023-24ನೇ ಸಾಲಿಗೆ ಬೆಸ್ತರು ಮತ್ತು ಬೆಸ್ತ ಇವರ ಉಪಜಾತಿಗೆ ಸೇರಿದ ಜನಾಂಗದವರಿಗೆ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023ರ ನವೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪ್ರವರ್ಗ-1ರ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾನುಭವಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವರ್ಯ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಕೇಂದ್ರ ಆಧಾರ್ ಅಧಿನಿಯಮ, 2016 ಸೆಕ್ಷನ್(7)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ, ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೆಸರು ಹೊಂದಾಣಿಕೆಯಾಗಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ, ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು, ಕುಟುಂಬದ ಬಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು, ಸರ್ಕಾರ ಅಥವಾ ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ ನಿಬಂಧನೆಗಳನ್ನು ಹೊಂದಿದವರಾಗಿರಬೇಕು, ಸರ್ಕಾರ ಮತ್ತು ನಿರ್ದೇಶಕ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರು ಸಹ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು ಅಥವಾ ಸೌಲಭ್ಯವನ್ನು ಜಾರಿಗೊಳಿಸಲಾಗುವುದು, ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಗಳನ್ನು ಜಾರಿಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕವೇರಿಯ ವೆಬ್‍ಸೈಟ್ https://ambigaradevelopment.karnataka.gov.in  ಅಥವಾ ದೂರವಾಣಿ ಸಂಖ್ಯೆ 08194-22082 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಅರ್ಜಿದಾರರು ಅರ್ಜಿಗಳನ್ನು 2023ರ ನವೆಂಬರ್ 2 ರೊಳಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ. ಸಂಪತ್‍ಕುಮಾರ್ ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours