ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.10:
ಚಿತ್ರದುರ್ಗ ತಾಲ್ಲೂಕಿನ ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಗ್ರಾಮದಲ್ಲಿ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ  ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಕೇಂದ್ರಸ್ಥಾನದಲ್ಲಿ ಮಾಡದಕರೆ (ಗೊಲ್ಲರಹಟ್ಟಿ) ಹಾಗೂ ಸಿಂಗಾಪುರ ಕಾವಲಹಟ್ಟಿ (ಲಂಬಾಣಿಹಟ್ಟಿ) ಗ್ರಾಮಗಳು ಸೇರಿ 05 ಎಎವೈ, 99 ಪಿ.ಹೆಚ್.ಹೆಚ್, 03 ಎನ್‍ಪಿ.ಹೆಚ್ ಪಡಿತರ ಚೀಟಿ ಸೇರಿದಂತೆ ಒಟ್ಟು 107 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ, ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ.
ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಯಾವುದೇ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗಧಿತ ಫಾರಂ “ಎ” ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಅಥವಾ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ  ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours