20 ಅಂಗನವಾಡಿ ಕಾರ್ಯಕರ್ತೆ, 34 ಸಹಾಯಕಿಯರ ಹುದ್ದೆಗೆ ಅರ್ಜಿ

 

ಮೊಳಕಾಲ್ಮುರು: 20 ಅಂಗನವಾಡಿ ಕಾರ್ಯಕರ್ತೆ, 34 ಸಹಾಯಕಿಯರ ಹುದ್ದೆಗೆ ಅರ್ಜಿ
*********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್30:
ಮೊಳಕಾಲ್ಮುರು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 20 ಅಂಗನವಾಡಿ ಕಾರ್ಯಕರ್ತೆಯರ ಮತ್ತು 34 ಸಹಾಯಕಿಯರ ಹುದ್ದೆಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಮಾರ್ಚ್ 27 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್ 27ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿ, ಶಾಲೆ, ರೈತ ಸಂಪರ್ಕ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸ್ಥಳೀಯ ಅಂಗನವಾಡಿ ಕೇಂದ್ರಗಳಲ್ಲಿಯೂ ಪ್ರಕಟಿಸಿರುವ ಪ್ರಕಟಣೆ ನೋಡಬಹುದಾಗಿದೆ ಎಂದು ಮೊಳಕಾಲ್ಮುರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours