ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.06:
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 06 ಗ್ರಾಮ ಪಂಚಾಯಿತಿ       (Supervisor)ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 26 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ, ಗೊಡಬನಾಳ್, ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ, ಎನ್.ದೇವರಹಳ್ಳಿ, ಗೌರಸಮುದ್ರ, ಮೊಳಕಾಲ್ಮೂರು ತಾಲ್ಲೂಕಿನ ಜೆ.ಬಿ ಹಳ್ಳಿಯಲ್ಲಿ  ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಒಟ್ಟು 6 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ 06 ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ..

ಇದನ್ನೂ ಓದಿ: ಮದಕರಿ ಬಳಗದಿಂದ ಅರ್ಜುನನಿಗೆ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿ

ಮೀಸಲಾತಿ ವಿವರ: ಚಿತ್ರದುರ್ಗ ತಾಲ್ಲೂಕು ಮದಕರಿಪುರ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ (ಪರಿಶಿಷ್ಟ ಜಾತಿ-ಇತರೆ), ಗೊಡಬನಾಳ್ ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಇತರೆ), ಚಳ್ಳಕರೆ ತಾಲ್ಲೂಕು ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ (ಪರಿಶಿಷ್ಟ ಪಂಗಡ-ಇತರೆ, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಮಹಿಳಾ ಅಭ್ಯರ್ಥಿ), ಗೌರಸಮುದ್ರ ಗ್ರಾಮ ಪಂಚಾಯಿತಿ (ಪ್ರವರ್ಗ-1-ಇತರೆ), ಮೊಳಕಾಲ್ಮುರು ತಾಲ್ಲೂಕು ಜೆ.ಬಿ.ಹಳ್ಳಿ ಗ್ರಾಮ ಪಂಚಾಯಿತಿ (ಸಾಮಾನ್ಯ ಅಭ್ಯರ್ಥಿ-ಗ್ರಾಮೀಣ ಅಭ್ಯರ್ಥಿ) ಗೆ ಮೀಸಲಾತಿ ನಿಗಧಿಪಡಿಸಲಾಗಿದೆ.
ಅರ್ಜಿ ದೊರೆಯುವ ಸ್ಥಳ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಹಾಗೂ ಸಂಬಂಧಪಟ್ಟ ತಾಲ್ಲೂಕು ಪಂಚಾಯತಿ ಮತ್ತು ಸಂಬಂಧಿಸಿದ 06 ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ಸ್ಥಳ: ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ “ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ  ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ಟೇಡಿಯಂ ರಸ್ತೆ, ಚಿತ್ರದುರ್ಗ ಈ ವಿಳಾಸಕ್ಕೆ ಮಾತ್ರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಜಿಲ್ಲೆಯ ವೆಬ್‍ಸೈಟ್ chitradurga.nic.in  ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಹಾಗೂ ಮಾಹಿತಿಗಾಗಿ ಖುದ್ದಾಗಿ  ಕಚೇರಿ ಅವಧಿಯಲ್ಲಿ ಹಾಗೂ ದೂರವಾಣಿ ಸಂಖ್ಯೆ 08194-223058 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours