ಚಿತ್ರದುರ್ಗ:ಬೆಂಗಳೂರು ನಿಮಾನ್ಸ್ ಎಪಿಡೀಮಿಯಾಲಜಿ ಜನ ಆರೋಗ್ಯ ಕೇಂದ್ರ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಆಯ್ಕೆ ಮಾಡಿಕೊಂಡು ಅವರನ್ನು ಕಾರ್ಯಕ್ರಮದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಇದರ ಸಂಬಂಧ ಯುವ ಪರಿವರ್ತಕರನ್ನು ಹಾಗೂ ಯುವ ಸಮಾಲೋಚಕರನ್ನು ಆಯ್ಕೆ ಮಾಡಲು ಇದೇ ಜನವರಿ 6 ರಿಂದ 12 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಯುವ ಪರಿವರ್ತಕರನ್ನು ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆ ಸೇರಿದಂತೆ ಒಟ್ಟು 5 ಜನರನ್ನು ಆಯ್ಕೆ ಮಾಡಲಾಗುವುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಸಮುದಾಯದಲ್ಲಿ ಕೆಲಸ ಮಾಡಿರುವವರನ್ನು ಅಪೇಕ್ಷಿಸಲಾಗಿದೆ.
ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ ಕನಿಷ್ಟ ವಯಸ್ಸು 21 ರಿಂದ 35 ವರ್ಷಗಳು ಇರಬೇಕು. ಯುವ ಪರಿವರ್ತಕರಿಗೆ ಗೌರವ ಧನವಾಗಿ ತಿಂಗಳಿಗೆ ರೂ.6000/- ನೀಡಲಾಗುವುದು. ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುವುದು. ಯುವ ಸಮಾಲೋಚಕರಿಗೆ ಶೈಕ್ಷಣಿಕ ಅರ್ಹತೆ ಪದವಿ )ಸೈಕಾಲಜಿ, ಸೋಷಿಯಲ್ ವರ್ಕ್ ಪದವಿ ತೇರ್ಗಡೆಯಾದವರಿಗೆ ಆದ್ಯತೆ ನೀಡಲಾಗುವುದು. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ ಕನಿಷ್ಟ 21 ರಿಂದ 35 ವರ್ಷಗಳ ಒಳಗೆ ಇರಬೇಕು. ಯುವ ಸಮಲೋಚಕರಿಗೆ ಗೌರವಧನವಾಗಿ ತಿಂಗಳಿಗೆ ರೂ.9000/-ನೀಡಲಾಗುವುದು..
ಇದನ್ನೂ ಓದಿ: ಚಿತ್ರದುರ್ಗ:ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ವಿಕಲಚೇತನರಿಂದ ಅರ್ಜಿ
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-235635ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
[t4b-ticker]
+ There are no comments
Add yours